ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಹರೀಶ್ ಪೂಂಜಾ ರಿಗೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ನಾಯಕರುಗಳ ನಡೆಯ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ಗರ೦.

Twitter
Facebook
LinkedIn
WhatsApp
ಶಾಸಕ ಹರೀಶ್ ಪೂಂಜಾ ರಿಗೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ನಾಯಕರುಗಳ ನಡೆಯ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ಗರ೦.

ಬೆಳ್ತಂಗಡಿ: ಬೆಳ್ತಂಗಡಿಯ ರಾಜಕೀಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು ಕಾಂಗ್ರೆಸ್ ನಾಯಕರುಗಳು ಬಿಜೆಪಿ ಶಾಸಕರಿಗೆ ಅಭಿನಂದನೆ ಸಲ್ಲಿಸಲು ಹೋಗಿ ಈಗ ಪಕ್ಷದ ನಾಯಕರುಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರ ಮೂರುವರ್ಷದ ಪೂರೈಸಿದ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ಅಭಿನಂದನೆ ಸಲ್ಲಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಹರೀಶ್ ಕುಮಾರ್ ಸಹೋದರ ಕಾಂಗ್ರೆಸ್ ನಾಯಕ ಯೋಗೀಶ್ ಕುಮಾರ್ ನಡೆಯ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ಗರ೦ ಆಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಆಪ್ತರೊಂದಿಗೆ ಈ ಬಗ್ಗೆ ಗಂಭೀರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಶಾಸಕ ವಸಂತ ಬಂಗೇರ ಈ ಬಗ್ಗೆ ನಾನು ಹೈಕಮಾಂಡ್ ಮುಂದೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ ನಾನು ಕಾಂಗ್ರೆಸ್ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಹರೀಶ್ ಕುಮಾರ್ ಅವರ ಸೋದರ ಅಲ್ಲದೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪೀತಾಂಬರ ಹೆರಾಜೆ, ಹಿರಿಯ ಕಾಂಗ್ರೆಸ್ ನಾಯಕ ಪಿಕೆ ರಾಜು ಪೂಜಾರಿ ಸಹ ಹರೀಶ್ ಪೂಂಜಾ ಅವರನ್ನು ಅಭಿನಂದಿಸಿ ಪತ್ರಿಕೆಯಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಆದರೆ ಹರೀಶ್ ಪೂಂಜಾ ಬಗ್ಗೆ ಸತತ ಆರೋಪ ಮಾಡುತ್ತಾ ಬಂದಿರುವ ಮಾಜಿ ಶಾಸಕ ವಸಂತ ಬಂಗೇರ ರಿಗೆ ಇದು ಮುಜುಗುರವಾಗಿದ್ದು ಜಿಲ್ಲಾಧ್ಯಕ್ಷರ ನಡೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಶಾಸಕ ಹರೀಶ್ ಪೂಂಜಾ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ನ ನಾಯಕರುಗಳಿಂದ ಹೊಗಳಲು ಪಟ್ಟದ್ದು ಈಗ ಕಾಂಗ್ರೆಸಿಗೆ ಮುಜುಗರ ತಂದಿದ್ದು, ಇದರಿಂದ ಬಂಗೇರ ಬಹಳಷ್ಟು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಬಿಜೆಪಿಯವರು ಈ ಬಗ್ಗೆ ಸಮರ್ಥನೆಯನ್ನು ವ್ಯಕ್ತಪಡಿಸುತ್ತಿದ್ದು, ಹರೀಶ್ ಪೂಂಜಾ ರವರ ಕೆಲಸ ಕಾರ್ಯವನ್ನು ಮೆಚ್ಚಿ ಕಾಂಗ್ರೆಸ್ಸಿನವರು ಅಭಿನಂದನೆ ಸಲ್ಲಿಸಿದ್ದಾರೆ. ಇದರಲ್ಲಿ ತಪ್ಪೇನು? ಈ ನಾಯಕರುಗಳಿಗೆ ಕಾಂಗ್ರೆಸ್ ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಅನಿಸಿಕೆ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು