ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಕ್ಷಕಿ ಹೊಡೆತದಿಂದ ವಿದ್ಯಾರ್ಥಿನಿ ಸಾವು ಪ್ರಕರಣ – ನಮಗೆ ಹಣ ಬೇಡ, ನ್ಯಾಯ ಬೇಕು: ವಿದ್ಯಾರ್ಥಿನಿ ಅಜ್ಜಿ

Twitter
Facebook
LinkedIn
WhatsApp
ಶಿಕ್ಷಕಿ ಹೊಡೆತದಿಂದ ವಿದ್ಯಾರ್ಥಿನಿ ಸಾವು ಪ್ರಕರಣ – ನಮಗೆ ಹಣ ಬೇಡ, ನ್ಯಾಯ ಬೇಕು: ವಿದ್ಯಾರ್ಥಿನಿ ಅಜ್ಜಿ

ಬೆಂಗಳೂರು: ಸ್ಕೂಲ್‍ನವರು (School) ಕೊಡುವ ನಾಲ್ಕು ಲಕ್ಷ ರೂ. ಬೇಡ, ನಮಗೆ ನನ್ನ ಮೊಮ್ಮಗಳ ಸಾವಿಗೆ ನ್ಯಾಯ ಬೇಕು ಎಂದು ನಿಶಿತಾ ಅಜ್ಜಿ ನರ್ಸಮ್ಮ ತಿಳಿಸಿದರು.

ಆರ್‌ಡಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕಿ (Teacher) ಹೊಡೆತದಿಂದ ವಿದ್ಯಾರ್ಥಿನಿ (Student) ನಿಶಿತಾ(12) ಶುಕ್ರವಾರ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿ ಮಾತನಾಡಿದ ಅವರು, ನಮ್ಮ ಮಗುವಿನ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ಮಾಡಿದ್ದಾರೆ. ಆಗ ಮಗು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದೆ. ಈ ಹಿಂದೆ ಕೂಡ ಡೆಸ್ಟರ್‌ನಿಂದ ಕಣ್ಣಿಗೆ ಹೊಡೆದಿದ್ದರು ಎಂದು ಆರೋಪಿಸಿದರು.

ನಿನ್ನೆ ಕೂಡ ಹೊಡೆದಿದ್ದಾರೆ, ಅದೇ ಕಾರಣಕ್ಕೆ ಮಗು ಸಾವನ್ನಪ್ಪಿದೆ. ನಮಗೆ ವಿಚಾರ ತಿಳಿದು ಸ್ಕೂಲ್ ಬಳಿ ಹೋದಾಗ ಮಗುಗೆ ಪ್ರಜ್ಞೆ ಇರಲಿಲ್ಲ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ವಿ, ಅಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಈಗ ಸ್ಕೂಲ್‍ನವರು, 4 ಲಕ್ಷ ಪರಿಹಾರ ಕೊಡ್ತೀವಿ ಅಂತಿದ್ದಾರೆ. ನಮಗೆ ಹಣ ಬೇಡ, ನಮಗೆ ನ್ಯಾಯಬೇಕು. ಹಲ್ಲೆ ಮಾಡಿದ ಶಿಕ್ಷಕಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ಇನ್ನೂ ನಿಶಿತಾಳ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯದಲ್ಲಿ ನಿಶಿತಾ ತನ್ನ ಸ್ಕೂಲ್‍ನಲ್ಲೇ ಓದುತ್ತಿದ್ದ ತಮ್ಮನನ್ನು ಮಧ್ಯಾಹ್ನ 1:30ರ ವೇಳೆ ಹೊರಗೆ ಕರೆದುಕೊಂಡು ಬಂದು ಅಜ್ಜಿ ಜೊತೆಗೆ ಬಿಟ್ಟು ಹೋಗಿದ್ದಳು. ಆದರೆ ಆಕೆಯನ್ನು 1:50ರ ವೇಳೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಕೂಲ್‍ನ ಹೊರಗೆ ತಂದಿದ್ದಾರೆ. ಸಿಬ್ಬಂದಿಯೇ ಬೈಕ್‍ವೊಂದರಲ್ಲಿ ಕೂರಿಸಿಕೊಂಡು, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿಂದ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ನಿಶಿತಾ ಮೃತಪಟ್ಟಿರುವ ವಿಚಾರ ತಿಳಿಸಿದ ನಂತರ ಪೋಷಕರಿಗೆ ವಿಚಾರ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆಗೆ ಹೋಗುವ ಮೊದಲೇ ವಿದ್ಯಾರ್ಥಿನಿ ಸಾವನ್ನಪ್ಪಿರುವುದು ದೃಢವಾಗಿದೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ