ಬುಧವಾರ, ನವೆಂಬರ್ 20, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?

Twitter
Facebook
LinkedIn
WhatsApp
shiggaon bypolls ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ವರಿಷ್ಠರ ಕರೆ ಮೇರೆಗೆ ದಿಢೀರ್‌ ಬೆಂಗಳೂರಿಗೆ ತೆರಳಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಸೈಯ್ಯದ ಅಜ್ಜಂಪೀರ್‌ ಖಾದ್ರಿ ಜತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ನಡೆಸಿದ ಸಂಧಾನ ಸಫಲವಾಗಿದ್ದು, ಖಾದ್ರಿ ಮುಂದಿನ ನಡೆ ಬಗ್ಗೆ ಈಗ ಕೇತ್ರದೆಲ್ಲೆಡೆ ವ್ಯಾಪಕ ಚರ್ಚೆ ಶುರುವಾಗಿದೆ.

NAYAN BAKERY

ಬಿಜೆಪಿ ಕೋಟಿಯಲ್ಲಿ ಈ ಬಾರಿ ಗೆಲ್ಲಲು ಕಾಂಗ್ರೆಸ್​​ ಪಣತೊಟ್ಟಿದ್ದು, ನಾನಾ ತಂತ್ರಗಳನ್ನು ರೂಪಿಸುತ್ತಿದೆ. ಇನ್ನು ಟಿಕೆಟ್​ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ​​ ಅಜ್ಜಂಪೀರ್ ಖಾದ್ರಿ ಅವರನ್ನು ನಾಯಕರು ಮನವೊಲಿಸಿದ್ದಾರೆ. ಆದರೂ ಸಹ ಸಚಿವ ಜಮೀರ್ ಅಹಮ್ಮದ್ ಖಾನ್, ಅಜ್ಜಂಪೀರ್ ಖಾದ್ರಿ ಅವರನ್ನು ಬೆಂಗಳೂರಿನಲ್ಲೇ ಲಾಕ್ ಮಾಡಿದ್ದಾರೆ.

ಅ.30ರಂದು ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರೆ ಎಂದು ಸ್ವತಃ ಸಿಎಂ ಸ್ಪಷ್ಟಪಡಿಸಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸನ್ನದ್ಧರಾಗಿದ್ದ ಖಾದ್ರಿ ಅವರನ್ನು ತಡೆಯಲು ಶುಕ್ರವಾರ ಶಿಗ್ಗಾವಿಗೆ ಆಗಮಿಸಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರ ಕೈಗೆ ಸಿಗದೇ ನಾಮಪತ್ರ ಸಲ್ಲಿಸಿ ಪಕ್ಷಕ್ಕೆ ಸೆಡ್ಡು ಹೊಡೆದಿದ್ದರು. ಇದರಿಂದ ಕಂಗಾಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೀಡಿದ ಬುಲಾವ್‌ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿಗೆ ತೆರಳಿದ ಖಾದ್ರಿ, ಜಮೀರ್‌ ಅಹ್ಮದ್‌ಖಾನ್‌ ಮಧ್ಯಸ್ಥಿಕೆಯಲ್ಲಿ ಸಿಎಂ ಜತೆಗೆ ಬೆಳಗ್ಗೆ ಮಾತುಕತೆ ನಡೆಸಿದರು.

ಮಧ್ಯಾಹ್ನದ ಹೊತ್ತಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ ನಡೆಸಿದ ಸಂಧಾನ ಫಲಪ್ರದವಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಖಾದ್ರಿ ಚುನಾವಣೆ ಪ್ರಚಾರದಲ್ಲಿ ಮನಪೂರ್ವಕವಾಗಿ ಪಾಲ್ಗೊಳ್ಳುವಿಕೆ ಹಾಗೂ ಪ್ರಚಾರದ ವೈಖರಿ ಬಗ್ಗೆ ಕ್ಷೇತ್ರದೆಲ್ಲೆಡೆ ಸಾಕಷ್ಟು ಚರ್ಚೆಯೂ ನಡೆದಿದೆ.

1999ರಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕರಾಗಿ ಕಾಂಗ್ರೆಸ್‌ ಸೇರ್ಪಡೆಯಾದ ಖಾದ್ರಿ ನಂತರ ಐದು ಸಾರ್ವತ್ರಿಕ ಚುನಾವಣೆಗಳಲ್ಲಿ ಸೋಲುಂಡಿದ್ದರು. 2018ರ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಸಂಘಟನೆಯಿಂದ ತಟಸ್ಥರಾಗಿದ್ದರು. 2023ರ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಆದರೆ, ತಟಸ್ಥರಾದ ದಿನದಿಂದ ಪಕ್ಷದ ಸಂಘಟನೆ ನೇತೃತ್ವ ವಹಿಸಿಕೊಂಡಿದ್ದ ಯಾಸೀರ್‌ಖಾನ್‌ ಪಠಾಣ್‌ ಮತ್ತು ಖಾದ್ರಿ ನಡುವೆ ಟಿಕೆಟ್‌ ಫೈಟ್‌ ನಡೆದಿದ್ದಾದರೂ ಪಕ್ಷದ ವರಿಷ್ಠರು ಪಠಾಣ್‌ ಅವರಿಗೆ ಟಿಕೆಟ್‌ ನೀಡಿದರು. ಸೋತರೂ ಪಠಾಣ್‌ ಸಂಘಟನೆಗೆ ಶ್ರಮಿಸಿದ್ದರು.

“ಮೊದಲಿನಿಂದಲೂ ನಾನು ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿ. ವ್ಯಕ್ತಿಗಿಂತ ಪಕ್ಷ ಮುಖ್ಯ. ಸಿಎಂ ಮತ್ತು ಡಿಸಿಎಂ ಅವರು ನಾನು ನಿಮ್ಮ ಜತೆಗಿರುತ್ತೇವೆ ಎಂದು ಭರವಸೆ ನೀಡಿದ್ದರಿಂದ ಆ. 30ಕ್ಕೆ ನಾಮಪತ್ರ ವಾಪಾಸ್‌ ಪಡೆಯಲು ತೀರ್ಮಾನಿಸಿದ್ದೇನೆ” ಎಂದು ಸಂಧಾನ ಸಭೆಯ ಬಳಿಕ ಬೆಂಗಳೂರಿನಲ್ಲಿ ಬಂಡಾಯ ಅಭ್ಯರ್ಥಿ ಸೈಯ್ಯದ ಅಜ್ಜಂಪೀರ್‌ ಖಾದ್ರಿ ಹೇಳಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಖಾದ್ರಿ, ‘‘ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಮಾತನಾಡಿ ಅವರನ್ನು ಒಪ್ಪಿಸಿ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸುತ್ತೇನೆ,’’ ಎಂದು ಹೇಳಿದರು.

‘‘ಸಿಎಂ ಮತ್ತು ಡಿಸಿಎಂ ಮನವೊಲಿಕೆಯಿಂದ ಸಮಾಧಾನಗೊಂಡಿರುವ ಖಾದ್ರಿ ಅವರು ಉಪಚುನಾವಣೆ ಕಣದಿಂದ ಹಿಂದೆ ಸರಿಯಲು ಒಪ್ಪಿದ್ದು, ಸೋಮವಾರ ನಾಮಪತ್ರ ವಾಪಸ್‌ ಪಡೆಯಲಿದ್ದಾರೆ,’’ ಎಂದು ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.

ಟಿಕೆಟ್​ ಸಿಗದಿದ್ದಕ್ಕೆ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸನ್ನದ್ಧರಾಗಿದ್ದ ಖಾದ್ರಿ ಅವರನ್ನು ತಡೆಯಲು ಶುಕ್ರವಾರ ಶಿಗ್ಗಾವಿಗೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಆಗಮಿಸಿದ್ದರು. ಆದ್ರೆ, ಖಾದ್ರಿ ಅವರು ಜಮೀರ್ ಕೈಗೆ ಸಿಗದೇ  ಇನ್ನೇನು ಕೆಲವೇ ನಿಮಿಷಗಳ ಬಾಕಿ ಇರುವಾಗೇ ಬೈಕ್​ನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ್ದರು. 

ಈ ಮೂಲಕ ಪಕ್ಷಕ್ಕೆ ಸೆಡ್ಡು ಹೊಡೆದಿದ್ದರು. ಅಲ್ಲದೇ ಕಾಂಗ್ರೆಸ್​ ನಾಯಕರ ವಿರುದ್ಧ ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದರು. ಈ ಮೂಲಕ ರಾಜ್ಯರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು. ಅಲ್ಲದೇ ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದರು.

ಇದರಿಂದ ಕಂಗಾಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೀಡಿದ ಬುಲಾವ್‌ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿಗೆ ತೆರಳಿದ ಖಾದ್ರಿ, ಜಮೀರ್‌ ಅಹ್ಮದ್‌ಖಾನ್‌ ಮಧ್ಯಸ್ಥಿಕೆಯಲ್ಲಿ ಸಿಎಂ ಜತೆಗೆ ಬೆಳಗ್ಗೆ ಮಾತುಕತೆ ನಡೆಸಿದ್ದಾರೆ. ಆದ್ರೆ, ಅಕ್ಟೋಬರ್ 30ರಂದು ಖಾದ್ರಿ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ