ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಗ್ಗಾವಿಯಲ್ಲಿ ಬೊಮ್ಮಾಯಿ ಪರ ಪತ್ನಿ ಚೆನ್ನಮ್ಮ ಮತಯಾಚನೆ

Twitter
Facebook
LinkedIn
WhatsApp
ಶಿಗ್ಗಾವಿಯಲ್ಲಿ ಬೊಮ್ಮಾಯಿ ಪರ ಪತ್ನಿ ಚೆನ್ನಮ್ಮ ಮತಯಾಚನೆ

ಹಾವೇರಿ: ರಾಜ್ಯದಲ್ಲಿ ಈಗ ವಿಧಾನಸಭೆ ಚುನಾವಣೆಯ ಕಾವು. ಅದರಲ್ಲೂ ರಾಜ್ಯದಲ್ಲಿ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಹಾವೇರಿ ಜಿಲ್ಲಾ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಬಿರುಸುಗೊಂಡಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿಯಿಂದ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್‌ನಿಂದ ಯಾಸೀರಖಾನ್ ಪಠಾಣ ಮತ್ತು ಜೆಡಿಎಸ್‌ನಿಂದ ಶಶೀಧರ ಯಲಿಗಾರ ಕಣದಲ್ಲಿದ್ದಾರೆ.

ಮೂವರ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಮಧ್ಯೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದ ಬಿಜೆಪಿ ಪ್ರಚಾರ ಸಮಿತಿಯ ಅಧ್ಯಕ್ಷಕಾಗಿದ್ದು ಅವರು ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ರಾಜ್ಯದ ವಿವಿಧಡೆ ಸಂಚರಿಸುತ್ತಿದ್ದಾರೆ. ಸಿಎಂ ಆಗಿದ್ದು ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವುದು ಸಿಎಂ ಬಸವರಾಜ್ ಬೊಮ್ಮಾಯಿಗೆ ದೊಡ್ಡ ಜವಾಬ್ದಾರಿ ಬಂದಿದೆ. ಈ ಮಧ್ಯ ತಾವು ಸ್ಪರ್ಧಿಸುವ ಶಿಗ್ಗಾಂವಿ ಸವಣೂರು ಕ್ಷೇತ್ರದ ಮತದಾರನನ್ನ ತಲುಪಲು ಈ ಹಿಂದಿನ ಚುನಾವಣೆಗಳಂತೆ ಬೊಮ್ಮಾಯಿಗೆ ಸಾಧ್ಯವಾಗುತ್ತಿಲ್ಲಾ.

ಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮತದಾರನ ಮನವೊಲೈಸಿಲು ಸಿಎಂ ಬಸವರಾಜ್ ಬೊಮ್ಮಾಯಿ ಸಹೋದರ, ಪತ್ನಿ ಚೆನ್ನಮ್ಮ ಮತ್ತು ಪುತ್ರ ಭರತ ಬೊಮ್ಮಾಯಿ ಮುಂದಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಪ್ರತಿ ಗ್ರಾಮಕ್ಕೆ ತೆರಳಿ ಪ್ರತಿ ಮನೆ ಮನೆಗೆ ಹೋಗಿ ಪ್ರತಿ ಮತದಾರನ ಮುಟ್ಟಲು ಯತ್ನಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಚೆನ್ನಮ್ಮ ತಮ್ಮದೆ ಆದ ಮಹಿಳಾ ತಂಡ ಕಟ್ಟಿಕೊಂಡು ಊರೂರಿಗೆ ತೆರಳಿ ಜನರಲ್ಲಿ ಪತಿ ಪರ ಮತಯಾಚನೆ ಮಾಡುತ್ತಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಹನುಮರಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚೆನ್ನಮ್ಮ ಮತಯಾಚನೆ ಮಾಡಿದರು. ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ, ಗ್ರಾಮದ ಶಿಭಾರಕ್ಕೆ ತೆರಳಿ ಬೀರಲಿಂಗೇಶ್ವರನಿಗೆ ಪುಷ್ಪಾರ್ಪಣೆ ಸಲ್ಲಿಸಿದ ನಂತರ ಗ್ರಾಮದಲ್ಲಿ ಮತಯಾಚನೆ ಮಾಡಿದರು.

ಪ್ರತಿ ಮನೆ ಮನೆಗೆ ತೆರಳಿ ಮನೆಯ ಸದಸ್ಯರನ್ನ ಭೇಟಿ ಮಾಡಿ ತಮ್ಮ ಪತಿ ಬೊಮ್ಮಾಯಿಗೆ ಮತ ಹಾಕುವಂತೆ ಮನವಿ ಮಾಡಿದರು. ಅಲ್ಲದೆ ಈ ಬಾರಿ ತಮ್ಮ ಪತಿ ಬೊಮ್ಮಾಯಿಗೆ ರಾಜ್ಯದ ಜವಾಬ್ದಾರಿ ಇದೆ. ಅವರು ನಿಮ್ಮನ್ನು ಭೇಟಿ ಆಗಲು ಉತ್ಸುಕರಾಗಿದ್ದಾರೆ ಆದರೆ ಜವಾಬ್ದಾರಿ ಹೆಚ್ಚು ಇರುವದರಿಂದ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಅವರೇ ನಿಮ್ಮಿಂದ ಮತಯಾಚನೆ ಮಾಡಿದ್ದಾರೆ ಎಂದು ತಿಳಿದು ಸಿಎಂ
ಬಸವರಾಜ್ ಬೊಮ್ಮಾಯಿಗೆ ಮತ ಹಾಕುವಂತೆ ಮನವಿ ಮಾಡಿದರು. ಇನ್ನು ಕೆಲ ಗಾರ್ಮೆಂಟ್ಸ ಕಾರ್ಮಿಕರ ಭೇಟಿ ಮಾಡಿದ ಚೆನ್ನಮ್ಮ ಕಾರ್ಮಿಕರ ಕಷ್ಟ ಸುಖಗಳ ಮಾಹಿತಿ ಪಡೆದರು. ತಮ್ಮ ಪತಿ ಈಗಾಗಲೇ ಶಿಗ್ಗಾಂವಿ ಸವಣೂರು ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಹತ್ತಾರು ಗಾರ್ಮೆಂಟ್ಸ್ ಫ್ಯಾಕ್ಟರಿ ತೆರೆದು ಸಾವಿರಾರು ಮಹಿಳೆಯರಿಗೆ ಕೆಲಸ ನೀಡಿದ್ದಾರೆ. ಈ ಬಾರಿ ಸಹ ಆಯ್ಕೆಯಾದರೇ ಇನ್ನು ಹೆಚ್ಚು ಮಹಿಳೆಯರಿಗೆ ಉದ್ಯೋಗ ನೀಡುವದಾಗಿ ಚೆನ್ನಮ್ಮ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ