ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೇ ರಾಜ್ಯದಲ್ಲಿ 5 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ

Twitter
Facebook
LinkedIn
WhatsApp
ಶೀಘ್ರದಲ್ಲೇ ರಾಜ್ಯದಲ್ಲಿ 5 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ

ಹುಬ್ಬಳ್ಳಿ: ರಾಜ್ಯದಲ್ಲಿ ಶೀಘ್ರದಲ್ಲೇ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಮುಂದಾಗಿದ್ದು, ದಾವಣಗೆರೆ, ಬಾಗಲಕೋಟೆ, ಬಾದಾಮಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರಿನಲ್ಲಿ ಏರ್‌ಪೋರ್ಟ್‌ ನಿರ್ಮಾಣ ಆರಂಭಗೊಳ್ಳಲಿದೆ ಎಂದರು.

ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದೆ. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಆಧಾರಿತ ಹಾಗೂ ಜನ ಸ್ನೇಹಿ ನೀತಿಗಳನ್ನು ನಾವು ಜಾರಿಗೆ ತರುತ್ತಿದ್ದೇವೆ. ಇದು ಮುಂಬರುವ ದಿನಗಳಲ್ಲಿ ನಮ್ಮ ಕರುನಾಡನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಲಿದೆ.

ಅಂತೆಯೇ ಜಾಗತಿಕ ಸಮಾವೇಶ ಸಿದ್ಧತೆ ಕುರಿತು ಮಾಹಿತಿ ನೀಡಿದ ಸಚಿವರು, ‘ಬೆಂಗಳೂರಿನಲ್ಲಿ ಜಾಗತಿಕ ಸಮಾವೇಶ ಪ್ರಾರಂಭವಾಗಲಿದ್ದು, ಕಳೆದ ಒಂದು ವರ್ಷದಿಂದ ತಯಾರಿ ಆರಂಭವಾಗಿದೆ. ನವೆಂಬರ್‌ನಲ್ಲಿ ಜಾಗತಿಕ ಸಮಾವೇಶ ನಡೆಯಲಿದೆ. ಕರ್ನಾಟಕಕ್ಕೆ ಅತೀ ಹೆಚ್ಚು ಬಂಡವಾಳ ಬಂದಿದೆ. ಇದು ಹೆಮ್ಮೆಯ ವಿಷಯ. ನಾವು ಅನೇಕ ಕಡೆ ಕರ್ನಾಟಕದ ಕೈಗಾರಿಕಾ ನೀತಿ ತಿಳಿಸಿದ್ದೇವೆ. 5 ಲಕ್ಷ ಜನರಿಗೆ ಉದ್ಯೋಗ ಸಿಗುವ ಪ್ರಯತ್ನ ನಾವು ಮಾಡಿದ್ದೇವೆ.

ಮುಂಬರುವ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ -2022 ರಲ್ಲಿ ನಮ್ಮ ಕರ್ನಾಟಕವು ಸುಮಾರು 5 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯನ್ನು ಪಡೆಯಲಿದೆ. ಈ ಮೂಲಕ ನಮ್ಮ ರಾಜ್ಯದ 5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ.

ಕರ್ನಾಟಕಕ್ಕೆ ಐದು ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬರಲಿದೆ. ಕೈಗಾರಿಕೆಗಾಗಿ 50 ಸಾವಿರ ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಸುತ್ತ ಮುತ್ತ 20 ಸಾವಿರ ಎಕರೆ, ಉಳಿದ ಭಾಗದಲ್ಲಿ ಕೈಗಾರಿಕೆಗಾಗಿ ಭೂಮಿ ವಶಪಡಿಸಿಕೊಳ್ಳಲಾಗಿದೆ. ಸ್ಥಗಿತಗೊಂಡಿರುವ ಕಾರ್ಖಾನೆಗಳನ್ನು ಮತ್ತೆ ಪ್ರಾರಂಭ ಮಾಡಲು ಮುಂದಾಗಿದ್ದೇವೆ. ಆದರೆ ಬೆಂಗಳೂರಲ್ಲಿ ಹೊಸ ಕಾರ್ಖಾನೆ ನಿರ್ಮಾಣಕ್ಕೆ ನಾವು ಸಬ್ಸಿಡಿ ಕೊಡುತ್ತಿಲ್ಲ. ಬಿಯಾಂಡ್ ಬೆಂಗಳೂರು (ಬೆಂಗಳೂರು ಹೊರತಾಗಿ) ಬರುವ ಕಾರ್ಖಾನೆಗಳಿಗೆ ನಾವು ಸೌಲಭ್ಯ ಕೊಡುತ್ತಿದ್ದೇವೆ ಎಂದು ನಿರಾಣಿ ಹೇಳಿದರು.

ಹುಬ್ಬಳ್ಳಿಯಲ್ಲಿ ಫಾಸ್ಟ್‌ ಮೂವಿಂಗ್‌ ಕನ್ಸ್ಯೂಮರ್‌ ಗೂಡ್ಸ್‌ (FMCG) ಕಾರ್ಖಾನೆಗೆ ವಿಶೇಷ ರಿಯಾಯಿತಿ ಕೊಟ್ಟಿದ್ದೇವೆ. ಇದರ ಕ್ರೆಡಿಟ್‌ ಹೋಗಬೇಕಿರೋದು ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ. ಧಾರವಾಡದ ಮುಮ್ಮಿಗಟ್ಟಿ ಬಳಿ FMCG ನಿರ್ಮಾಣ. ಇದು ದೇಶದಲ್ಲಿ ಮೊದಲ FMCG. ದಿನನಿತ್ಯದ ಬಳಕೆ ವಸ್ತುಗಳ ನಿರ್ಮಾಣ ಮಾಡುವ ಕಾರ್ಖಾನೆ. ಸರ್ಕಾರದಿಂದ ಶೇಕಡಾ 20 ರಷ್ಟು ರಿಯಾಯಿತಿ ಕೊಡಲಾಗಿದೆ. ಕೋವಿಡ್ ಆದ ಮೇಲೆ ಜಾಗತಿಕ ಸಮಾವೇಶ ನಡಿತಿರೋದು ಕರ್ನಾಟಕದಲ್ಲಿ ಮಾತ್ರ. ಜಾಗತಿಕ ಸಮಾವೇಶದಿಂದ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ