ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ – 3 ಲಷ್ಕರ್ ಉಗ್ರರ ಸಾವು

Twitter
Facebook
LinkedIn
WhatsApp
ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ – 3 ಲಷ್ಕರ್ ಉಗ್ರರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್ (Shopian) ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ (Terrorists) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಷೇಧಿತ ಭಯೋತ್ಪಾದನಾ ಸಂಘಟನೆ ಎಲ್‌ಇಟಿಯ 3 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ. ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಭದ್ರತಾ ಪಡೆಗಳು ಶೋಪಿಯಾನ್ ಝೈನಾಪೋರಾ ಪ್ರದೇಶದ ಮುಂಜ್ ಮಾರ್ಗ್ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಶೋಧಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಭಯೋತ್ಪಾದಕರು ಸಿಕ್ಕಿಬಿದ್ದಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ.

ಹತರಾಗಿರುವ ಮೂವರು ಭಯೋತ್ಪಾದಕರಲ್ಲಿ ಇದೀಗ ಇಬ್ಬರ ಗುರುತು ಪತ್ತೆಹಚ್ಚಲಾಗಿದೆ. ಅದರಲ್ಲೊಬ್ಬ ಕಾಶ್ಮೀರ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ಲೋನ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದ ಉಮರ್ ನಜೀರ್ ಎಂದು ಗುರುತಿಸಲಾಗಿದೆ.

ಉಗ್ರರಿಂದ 1 ಎಕೆ 47 ರೈಫಲ್ ಹಾಗೂ 2 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ