ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಕ್ರಾಂತಿ ಹೊತ್ತಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ?

Twitter
Facebook
LinkedIn
WhatsApp
ರಾಜ್ಯದಲ್ಲಿ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತದೆ-ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ವಿಚಾರ ಮುನ್ನಲೆಗೆ ಬಂದಿದ್ದು ಸಚಿವಸ್ಥಾನಾಕಾಂಕ್ಷಿಗಳ ಎದೆಬಡಿತ ಹೆಚ್ಚಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಕಸರತ್ತು ನಡೆಸಿ ವಿಫಲರಾಗಿರುವ ಶಾಸಕರು ಅಂತಿಮ ಹಂತದ ಸರ್ಕಸ್ ಆರಂಭಿಸಿದ್ದಾರೆ. ಸಿಎಂ ಭೇಟಿ ಮಾಡುವ ಮೂಲಕ ನಾವು ಸಚಿವ ಸ್ಥಾನದ ನೀರಿಕ್ಷೆಯಲ್ಲಿದ್ದೇವೆ ಎಂಬ ಸಂದೇಶ ನೀಡಲು ಪ್ರಯತ್ನಿಸುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಹೈಡ್ರಾಮಾಗಳು ನಡೆಯೋದು ಕಾಮನ್ ಸಂಗತಿ. ಈ ಐದು ವರ್ಷದ ಅವಧಿಯಲ್ಲೂ ಈಗಾಗಲೇ ಎರಡನೇ ಸಿಎಂ ಕಾರ್ಯನಿರ್ವಹಿಸುತ್ತಿದ್ದು, ಸಂಕ್ರಾಂತಿ ಬಳಿಕ ಮೂರನೇ ಸಿಎಂ ಎಂಬ ಊಹಾಪೋಹವೂ ದಟ್ಟವಾಗಿದೆ. ಈ ಮಧ್ಯೆ ಇನ್ನೇನೂ ಒಂದೂವರೆ ವರ್ಷ ಮಾತ್ರ ಬಾಕಿ ಇರುವ ಸಚಿವ ಸಂಪುಟದಲ್ಲಿ ಒಮ್ಮೆಯಾದರೂ ಸ್ಥಾನ ಪಡೆಯಬೇಕೆಂಬ ಕಾರಣಕ್ಕೆ ಹಲವು ಶಾಸಕರು ಸಿಎಂ ಮನೆಗೆ ಎಡತಾಕಲಾರಂಭಿಸಿದ್ದಾರೆ.

ಈ ಪೈಕಿ ಶತಾಯ ಗತಾಯ ಮಂತ್ರಿಯಾಗಲೇಬೇಕಂದು ಪಣತೊಟ್ಟಿರುವ ಹಿರಿಯೂರು ಶಾಸಕಿ ಪೂರ್ಣಿಮಾ ಸಿಎಂ ಆರ್.ಟಿ.ನಗರ ನಿವಾಸಕ್ಕೆ ಭೇಟಿ ನೀಡಿ ಸಿಎಂಗೆ ಮನವಿ ಸಲ್ಲಿಸಿ ದ್ದಾರೆ. ಹಿಂದಿನ ಭಾರಿಯೂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆಯುವ‌ ನೀರಿಕ್ಷೆಯಲ್ಲಿದ್ದ ಪೂರ್ಣಿಮಾ ಸ್ಥಾನ ಸಿಗದೇ ಇದ್ದಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಈಗಲೂ ಸಿಎಂ ಭೇಟಿ‌ಮಾಡಿರುವ ಪೂರ್ಣಿಮಾ ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಕಾರ್ಯಕ್ಷಮತೆ, ಜಾತಿಪಂಗಡದ ಆಧಾರದ ಮೇಲೆ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಬಿಜೆಪಿಯ ಹಿರಿಯ ಶಾಸಕ ಹಾಗೂ ಮೈಸೂರು ಭಾಗದ ಬಿಜೆಪಿಯ ಕಟ್ಟಾಳು ರಾಮದಾಸ್ ಕೂಡ ಸಚಿವ ಸ್ಥಾನದ ನೀರಿಕ್ಷೆಯಲ್ಲಿದ್ದು ಈ ಕಾರಣಕ್ಕಾಗಿಯೇ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ‌ . ಆರ್. ಟಿ.ನಗರ ನಿವಾಸದಲ್ಲಿ ರಾಮದಾಸ್ ಸಿಎಂ ಭೇಟಿ ಮಾಡಿದ್ದಾರೆ.

ಇದಲ್ಲದೇ ಬಿಎಸ್ವೈ ಆಪ್ತ ರೇಣುಕಾಚಾರ್ಯ, ಬೆಂಗಳೂರು ಶಾಸಕ ಸತೀಶ್ ರೆಡ್ಡಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಕೂಡಾ ಸ್ಥಾನ ಪಡೆಯುವ ನೀರಿಕ್ಷೆಯಲ್ಲಿದ್ದಾರೆ. ಇನ್ನು ಸಚಿವ ಸಂಪುಟದಿಂದ ಮಂಡ್ಯದ ನಾರಾಯಣಗೌಡ್ ಹಾಗೂ ಶಶಿಕಲಾ ಜೊಲ್ಲೆಯನ್ನು ಕೈಬಿಡುತ್ತಾರೆ ಎನ್ನಲಾಗಿದ್ದು ಒಟ್ಟಾರೆ ಸಚಿವ ಸಂಪುಟ ವಿಸ್ತರಣೆಯಾಗೋದೇ ನಿಜವಾದಲ್ಲಿ ರಾಜ್ಯದಲ್ಲಿ ಮತ್ತಷ್ಟು ಪೊಲಿಟಿಕಲ್ ಹೈಡ್ರಾಮಾಗಳನ್ನು ಉಚಿತವಾಗಿ ನೋಡೋ ಭಾಗ್ಯ ಜನರಿಗೆ ಸಿಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು