ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ ಎಂದ ಕಾಂಗ್ರೆಸ್

Twitter
Facebook
LinkedIn
WhatsApp
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ ಎಂದ ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಲ್ಲೇಖಿಸಿದ್ದಾರೆ. 

ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆದರೂ ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು, ಈಶ್ವರಪ್ಪ ಕೇಸ್ ಕ್ಲೋಸ್ ಮಾಡಿದ್ದಾರೆ. ಇದೊಂದು ದುರ್ದೈವದ ಸಂಗತಿ. ಮಾಜಿ ಸಚಿವರ ವಿರುದ್ಧ ಸಂತೋಷ್ ಪಾಟೀಲ್‌ ನೇರ ಆರೋಪ ಮಾಡಿದ್ದರು. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದರು. ಅದರೆ ಬಿ-ರಿಪೋರ್ಟ್ ಹಾಕಿ‌ ಕೇಸ್ ಕ್ಲೋಸ್ ಮಾಡಿದ್ದಾರೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾ ಡಿಪಾರ್ಟ್ ಮೆಂಟ್ ಪೇಲ್ಯೂರ್ ಆಗಿದೆ ಎಂದರು.

ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವರ ಪತ್ನಿಯೇ ನ್ಯಾಯ ಸಿಗಲ್ಲ ಅಂತ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ಬಹುಶಃ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಯವರನ್ನ ಹೆದರಿಸಿರಬಹುದು. ಅದಕ್ಕೆ ಹೆದರಿ ಅಧಿಕಾರಿಗಳ ಮೂಲಕ ಕೇಸ್ ಮುಚ್ಚಿಸಿರಬಹುದು. ಅವರ ಕುಟುಂಬದ ದುಃಖ ಇನ್ನೂ‌ ಮರೆಯಾಗಿಲ್ಲ. ಅಷ್ಟರೊಳಗೆ ಬಿ ರಿಪೋರ್ಟ್ ಹಾಕಿದ್ದಾರೆ. ಸರ್ಕಾರವೇ ಇದರಲ್ಲಿ ಶಾಮೀಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪಿಸಿದ್ದಾರೆ.ಳಗಾವಿ ಮೂಲದ ಸಂತೋಷ್ ಪಾಟೀಲ್​ ಅವರು ಕಳೆದ ಏಪ್ರಿಲ್ 11ರಂದು ಉಡುಪಿಯ ಹೋಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಶ್ವರಪ್ಪ ವಿರುದ್ಧ 40 ಪರ್ಸೆಂಟ್​ ಕಮಿಷನ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್​ ಈಶ್ವರಪ್ಪ ಅವರು ರಾಜೀನಾಮೆ ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ