ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಸತ್ ಭವನವನ್ನು ಶೂಟಿಂಗ್ ಗಾಗಿ ಕೊಡುವಂತೆ ಕೇಳಿದ ಕಂಗನಾ ರಣಾವತ್

Twitter
Facebook
LinkedIn
WhatsApp
ಸಂಸತ್ ಭವನವನ್ನು ಶೂಟಿಂಗ್ ಗಾಗಿ ಕೊಡುವಂತೆ ಕೇಳಿದ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ ಎಮರ್ಜನ್ಸಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾವನ್ನು ಅವರೇ ನಿರ್ದೇಶಿಸಿ, ನಟಿಸುತ್ತಿರುವುದರಿಂದ ಸಾಕಷ್ಟು ಜವಾಬ್ದಾರಿಗಳನ್ನೂ ಅವರು ತಗೆದುಕೊಂಡಿದ್ದಾರೆ. ಇದು ಇಂದಿರಾ ಗಾಂಧಿ ಅವರ ಹೇರಿದ್ದ ತುರ್ತುಪರಿಸ್ಥಿತಿಯ ಕುರಿತಾಗಿ ಮಾಡುತ್ತಿರುವ ಸಿನಿಮಾವಾಗಿದ್ದರಿಂದ ಸಂಸತ್ ಭವನ್ನು ಶೂಟಿಂಗ್ ಗೆ ಕೊಡುವಂತೆ ಅವರು ಕೇಳಿಕೊಂಡಿದ್ದಾರೆ.

ಸಿನಿಮಾ ಆದಷ್ಟು ನೈಜವಾಗಿಯೇ ಮೂಡಿ ಬರುಬೇಕು ಎನ್ನುವುದು ಅವರ ಕನಸು. ಇಂದಿರಾ ಗಾಂಧಿ ಕಾಲದಲ್ಲಿ ಸಂಸತ್ ನಲ್ಲಿ ನಡೆದ ಘಟನೆಗಳನ್ನು ದೃಶ್ಯವಾಗಿಸುವ ಆಸೆ ಅವರದ್ದು ಹಾಗಾಗಿಯೇ ಸಂಸತ್ ಭವನವನ್ನು ಅವರು ಶೂಟಿಂಗ್ ಮಾಡಲು ಕೇಳಿದ್ದಾರೆ. ಮತ್ತು ತಾವು ಯಾವೆಲ್ಲ ಭಾಗದಲ್ಲಿ ಚಿತ್ರೀಕರಣ ಮಾಡುವ ಪ್ಲ್ಯಾನ್ ಹೊಂದಲಾಗಿದೆ ಎನ್ನುವ ವಿವರವನ್ನೂ ಅವರು ಕೇಳುಹಿಸಿದ್ದಾರಂತೆ.

ನಿಯಮಗಳ ಪ್ರಕಾರ ಸರಕಾರಿ ಸ್ವಾಮ್ಯದ ಟಿವಿಗಳ ಕ್ಯಾಮೆರಾಗಳನ್ನು ಮಾತ್ರ  ಒಳಗೆ ಬಿಡಲಾಗುತ್ತದೆ. ಅಲ್ಲದೇ, ಶೂಟಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ವೇಳೆಯಲ್ಲಿ ಕಂಗನಾ ಬೇಡಿಕೆಯನ್ನು ಸರಕಾರ ನಿರಾಕರಿಸುವ ಸಾಧ್ಯತೆಯೇ ಹೆಚ್ಚಿದೆ. ಬಿಜೆಪಿ ಪರ ಮತ್ತು ಮೋದಿ ಪರ ಕಂಗನಾ ಹಲವಾರು ಬಾರಿ ಮಾತನಾಡಿದ್ದಾರೆ. ಹಾಗಾಗಿ ಕಂಗನಾಗಾಗಿ ನಿಯಮ ಬದಲಿಸಿ, ಅನುಮತಿ ಕೊಡಲಾಗುತ್ತಾ ಎನ್ನುವ ಚರ್ಚೆ ಕೂಡ ನಡೆದಿದೆ. ಈವರೆಗೂ ಸಂಸತ್ ಒಳಗೆ ಸಿನಿಮಾಗಾಗಿ ಶೂಟಿಂಗ್ ಮಾಡಲು ಅನುಮತಿ ಕೊಟ್ಟಿಲ್ಲವಾದ್ದರಿಂದ ಕಂಗನಾ ಆಸೆ ನಿರಾಸೆ ಆಗುವ ಸಾಧ್ಯತೆಯೇ ಹೆಚ್ಚಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ