ಬುಧವಾರ, ಮೇ 15, 2024
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಸದ ಸ್ಥಾನ ಕಳೆದುಕೊಳ್ತಾರಾ ರಾಹುಲ್‌ ಗಾಂಧಿ?

Twitter
Facebook
LinkedIn
WhatsApp
suicide16709127311678050822 6

ನವದೆಹಲಿ (ಮಾ.23): ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಭರದಲ್ಲಿ ಇಡೀ ಮೋದಿ ಜಾತಿಯನ್ನೇ ಕಳ್ಳರು ಎನ್ನುವ ಅರ್ಥದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿಯನ್ನು ದೋಷಿ ಎಂದು ಸೂರತ್‌ ಕೋರ್ಟ್‌ ತೀರ್ಪು ನೀಡಿದೆ. 2019ರ ಲೋಕಸಭಾ ಚುನಾವಣೆಯ ವೇಳೆ ಕೋಲಾರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ‘ಕಳ್ಳರೆಲ್ಲಾ ಮೋದಿ ಸರ್‌ನೇಮ್‌ ಯಾಕೆ ಹೊಂದಿರುತ್ತಾರೆ’ ಎಂದು ಹೇಳಿದ್ದರು. ಈ ಕುರಿತಾಗಿ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಳೆದ ಫೆಬ್ರವರಿಯಲ್ಲಿ ಗುಜರಾತ್‌ ಹೈಕೋರ್ಟ್‌ ಪ್ರಕರಣದ ಮೇಲಿದ್ದ ತಡೆಯಾಜ್ಞೆ ತೆಗೆದ ನಂತರ ಮತ್ತೆ ವಿಚಾರಣೆ ಆರಂಭಿಸಲಾಗಿತ್ತು. ಈಗ ಈ ಕೇಸ್‌ನಲ್ಲಿ ರಾಹುಲ್‌ ಗಾಂಧಿ ದೋಷಿ ಎಂದಿರುವ ಕೋರ್ಟ್‌ ಅವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಲಾಗಿತ್ತು. ಬಳಿಕ ಜಾಮೀನು ಪಡೆದ ರಾಹುಲ್‌ ಗಾಂಧಿಗೆ ಮೇಲಿನ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಕೋರ್ಟ್‌ ದೋಷಿ ಎಂದು ತೀರ್ಪು ನೀಡಿದ ಬಳಿಕ ಮಾಡಿದ ಮೊದಲ ಟ್ವೀಟ್‌ನಲ್ಲಿ ಮಹಾತ್ಮ ಗಾಂಧೀಜಿ ಅವರ ಮಾತನ್ನು ನೆನಪಿಸಿಕೊಂಡಿದ್ದರು. ‘ಸತ್ಯವೇ ದೇವರು. ಅಹಿಂಸೆ ಅದನ್ನು ತಲುಪುವ ಮಾರ್ಗ’ ಎಂದು ಬರೆದಿದ್ದರು. ಇನ್ನು ರಾಹುಲ್‌ ಗಾಂಧಿ ದೋಷಿ ಎಂದು ಹೇಳಿರುವ ತೀರ್ಪಿಗೆ ಇಡೀ ಕಾಂಗ್ರೆಸ್‌ನಲ್ಲಿ ತಳಮಳ ಆರಂಭವಾಗಿದೆ. ರಾಹುಲ್‌ ಗಾಂಧಿ ಅವರ ಸಂಸತ್‌ ಸದಸ್ಯ ಸ್ಥಾನ ಕಳೆದುಕೊಳ್ಳುತ್ತಾರಾ ಎನ್ನುವ ಅನುಮಾನವೂ ಕಾಡಿದೆ.

ಅನರ್ಹವಾಗಲಿದ್ದಾರಾ ರಾಹುಲ್‌ ಗಾಂಧಿ?: ಕೋರ್ಟ್‌ನಿಂದ ಕ್ರಿಮಿನಲ್‌ ಮೊಕದ್ದಮೆಯಲ್ಲಿ ದೋಷಿ ಎಂದು ತೀರ್ಪು ಬಂದಿರುವ ಕಾರಣ ರಾಹುಲ್‌ ಗಾಂಧಿ ಅವರ ಸಂಸದ ಸ್ಥಾನ ಅನರ್ಹವಾಗಲಿದೆಯೇ ಎನ್ನುವ ಅನುಮಾನ ಮಾಡಿದೆ. ಆದರೆ, ಸಂಸತ್‌ ಸದಸ್ಯ ಸ್ಥಾನದಿಂದ ತಕ್ಷಣವೇ ಅವರು ಅನರ್ಹರಾಗೋದಿಲ್ಲ ಎಂದು ಸುಪ್ರೀಂ ಕೋರರ್ಟ್‌ ವಕೀಲ ಉಪಮನ್ಯು ಹಜರಿಕಾ ತಿಳಿಸಿದ್ದಾರೆ. ‘ಅಮಾನತುಗೊಂಡ ಶಿಕ್ಷೆಯನ್ನು ರಾಹುಲ್‌ ಗಾಂಧಿಗೆ ನೀಡಲಾಗಿದೆ. ಅವರಿಗೆ ಶಿಕ್ಷೆ ನೀಡಲಾಗಿದ್ದರೂ ಇದು ತಕ್ಷಣವೇ ಜಾರಿಗೆ ಬರೋದಿಲ್ಲ. ಮುಂದಿನ 30 ದಿನಗಳು ರಾಹುಲ್‌ ಗಾಂಧಿ ಪಾಲಿಗೆ ಪ್ರಮುಖವಾದುದಾಗಿದೆ. ಸಂಸತ್‌ ಸದಸ್ಯರಾಗಿ ಮುಂದುವರಿಯಲು ಸೂರತ್‌ ಜಿಲ್ಲಾ ಕೋರ್ಟ್‌ ನೀಡಿದ್ದ ಆದೇಶವನ್ನು ಮೇಲಿನ ಕೋರ್ಟ್‌ಗೆ ತೆರಳು ರದ್ದು ಮಾಡಿಸಬೇಕು ಅಥವಾ ತಡೆಯಾಜ್ಞೆ ತರಬೇಕು ಎಂದು ಹೇಳಿದ್ದಾರೆ.

‘ಮಾಧ್ಯಮಗಳನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ, ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಯತ್ನ ನಡೆಯುತ್ತಿದೆ ಮತ್ತು ವಿವಿಧ ರಾಜಕೀಯ ಪಕ್ಷಗಳ ಜನರ ವಿರುದ್ಧ ಈ ಮಟ್ಟದಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂದು ಪ್ರಕರಣದ ಕುರಿತು ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌ ಪ್ರತಿಕ್ರಿಯೆ ನೀಡಿದ್ದಾರೆ.

‘ಹೇಡಿ, ಸರ್ವಾಧಿಕಾರಿ ಬಿಜೆಪಿ ಸರ್ಕಾರ ಇಂದು ರಾಹುಲ್‌ ಗಾಂಧಿಗೆ ಕುಟುಕಿದೆ. ಆದರೆ, ವಿರೋಧ ಪಕ್ಷದವರು ನಾವು ಅವರ ಕರಾಳ ಕೃತ್ಯಗಳನ್ನು ಬಯಲಿಗೆಳೆಯುತ್ತಿದ್ದೇವೆ. ಮೋದಿ ಸರಕಾರ ರಾಜಕೀಯ ದಿವಾಳಿತನಕ್ಕೆ ಬಲಿಯಾಗಿದೆ. ED ಪೊಲೀಸರನ್ನು ಕಳುಹಿಸುತ್ತದೆ. ರಾಜಕೀಯ ಭಾಷಣಗಳ ಮೇಲೆ ಕೇಸುಗಳನ್ನು ಹಾಕುತ್ತಾರೆ. ಈ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್‌ ಮಾಡಿದ್ದಾರೆ.


‘ಹೆದರಿರುವ ಇಡೀ ಆಡಳಿತ ಯಂತ್ರವು ನಮ್ಮ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ರಾಹುಲ್‌ ಗಾಂಧಿಗೆ ಶಿಕ್ಷೆ ನೀಡುವ ಮೂಲಕ ಇದನ್ನು ಮಾಡಲಾಗುತ್ತಿದೆ. ಆದರೆ, ನನ್ನ ಸಹೋದರ ಭಯಪಡೆದೋದಿಲ್ಲ. ಆತ ಎಂದಿಗೂ ಭಯಪಟ್ಟಿಲ್ಲ. ಸತ್ಯವನ್ನೇ ಹೇಳುತ್ತಾ ಬದುಕಿದ್ದಾನೆ. ಅದನ್ನು ಹೇಳುತ್ತಲೇ ಇರುತ್ತಾನೆ.  ದೇಶದ ಜನರ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ. ಸತ್ಯದ ಶಕ್ತಿ ಮತ್ತು ಕೋಟ್ಯಂತರ ದೇಶವಾಸಿಗಳ ಪ್ರೀತಿ ಅವರ ಬಳಿ ಇದೆ’ ಎಂದು ರಾಹುಲ್‌ ಸಹೋದರಿ ಪ್ರಿಯಾಂಕಾ ವಾದ್ರಾ ಟ್ವೀಟ್‌ ಮಾಡಿದ್ದಾರೆ. ಇನ್ನು ಕಾಂಗ್ರೆಸ್‌ ಪಕ್ಷ, ‘ಗಾಂಧಿ ಹೆದರೋದಿಲ್ಲ’ ಎಂದು ಟ್ವೀಟ್‌ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ