ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರ ಬಲಿ..!

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಾರಿಗೆ ಸವಾರನೊಬ್ಬ ಬಲಿಯಾಗಿದ್ದಾನೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಮೃತ ದುರ್ದೈವಿ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ (Road Accident) ಸಂಭವಿಸಿದೆ.
ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಪ್ರಕಾಶ್‌ಗೆ ಗುದ್ದಿದೆ. ಈ ವೇಳೆ ಗಂಭೀರ ಗಾಯಗೊಂಡ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್ ಮೃತಪಟ್ಟಿದ್ದಾರೆ.