ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

Twitter
Facebook
LinkedIn
WhatsApp
100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ ಪ್ರೌಢಶಾಲೆ ನಯನಾಡು (NAINAD HIGHSCHOOL) ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶೇಕಡಾ ನೂರು ಸಾಧನೆ ಮಾಡಿದೆ. ಅಲ್ಲದೆ ಗುಣಮಟ್ಟದ ಫಲಿತಾಂಶದಲ್ಲಿ ಕೂಡ ಅತ್ಯುತ್ತಮ ಸಾಧನೆ ಮಾಡಿದೆ.

2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸರಕಾರಿ ಪ್ರೌಢಶಾಲೆ ನಯನಾಡು 100% ಫಲಿತಾಂಶದ ಸಾಧನೆ ಮಾಡಿದೆ.

ಆರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು, ಒಟ್ಟು ಹದಿನಾರು ವಿದ್ಯಾರ್ಥಿಗಳು ಪ್ರಥಮ ದರ್ಜೆ ಅಂಕಗಳನ್ನು ಪಡೆದು‌ ಉತ್ತೀರ್ಣರಾಗಿದ್ದಾರೆ.

ಸುಶ್ಮಿತಾ 599 ಅಂಕಗಳನ್ನು ಪಡೆದು ಪ್ರಥಮ ಸ್ಥಾನಿಯಾದರೆ, ಅನನ್ಯ 581, ಧೀರಜ್ 570 ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.. ಸತತ ನಾಲ್ಕನೆಯ ಬಾರಿ ನೂರು ಶೇಕಡಾ ಫಲಿತಾಂಶದ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಮತ್ತು ಊರವರು ಅಭಿನಂದಿಸಿದ್ದಾರೆ.

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಅತ್ಯಂತ ಗ್ರಾಮೀಣ ಪ್ರದೇಶದ ಹಸಿರಿನಿಂದ ಕಂಗೊಳಿಸುತ್ತಿರುವ ಪ್ರಕೃತಿ ನಡುವೆ ಇರುವ ಈ ಶಾಲೆ ಖಾಸಾಗಿ ಶಾಲೆಗಳನ್ನು ಮೀರಿ ಶೈಕ್ಷಣಿಕವಾಗಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ‌ ಸತತವಾಗಿ ಅದ್ಭುತ ಸಾಧನೆ ಮೆರೆಯುತ್ತಿದೆ. ಈ ಸಾಧನೆಗೆ ಗರಿ ಎಂಬಂತೆ ಮಕ್ಕಳ ದಾಖಲಾತಿ ಹೆಚ್ಚುತ್ತಿದ್ದು, ಈ‌ ನಿಟ್ಟಿನಲ್ಲಿ ಹೆಚ್ಚುವರಿ ತರಗತಿ ಕೊಠಡಿಗಳು, ಆಟದ ಮೈದಾನ ವಿಸ್ತರಣೆ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಗಮನಹರಿಸಬೇಕಿದೆ. 

ಈಗಾಗಲೇ ಎಸ್ಡಿಎಂಸಿ ಮತ್ತು‌ ದಾನಿಗಳ ಸಹಕಾರದಿಂದ ಹೊಸದಾಗಿ ಸುಣ್ಣ ಬಣ್ಣ ಮತ್ತು ಗೋಡೆಗೆ ವರ್ಲಿ ಕಲಾಕೃತಿಗಳಿಂದ ಕಂಗೊಳಿಸುತ್ತಿರುವ ಶಾಲೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂಬುದು ವಿದ್ಯಾಭಿಮಾನಿಗಳ ಆಶಯ.

ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನ ಗಳಿಸಿದ ಯಾದಗಿರಿ ಜಿಲ್ಲೆಯಲ್ಲಿ ಶೇ 50.59 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

625 ಅಂಕಕ್ಕೆ 625 ಅಂಕವನ್ನು ಬಾಗಲಕೋಟೆಯ ಅಂಕಿತ ಬಸಪ್ಪ ಎಂಬ ವಿದ್ಯಾರ್ಥಿನಿ ಪಡೆದಿದ್ದಾರೆ. ಇವರು ರಾಜ್ಯದಲ್ಲಿ ಅತಿ ಹೆಚ್ಚು ಅಂಕ ಪಡೆದ ಏಕೈಕ ವಿದ್ಯಾರ್ಥಿಯಾಗಿದ್ದಾರೆ. ಅಲ್ಲದೆ ದಕ್ಷಿಣ ಕನ್ನಡದ ಚಿನ್ಮಯಿ 624, ಸಹನಾ 624 ಅಂಕಗಳನ್ನು ಗಳಿಸಿದ್ದಾರೆ.

ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ