ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸದ್ದಿಲ್ಲದೆ ಎಎಪಿ ಸಂಸದ ರಾಘವ್ ಚೆಡ್ಡಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಪರಿಣೀತಿ ಚೋಪ್ರಾ

Twitter
Facebook
LinkedIn
WhatsApp
ಬಾಲಿವುಡ್ ನ ಖ್ಯಾತ ನಟಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ  ಎಂಗೇಜ್ ಮೆಂಟ್  ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಿಟೌನ್ ನಲ್ಲಿ ಹರಿದಾಡುತ್ತಿತ್ತು. ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿರುವ ವಿಷಯ ಈ ಸುದ್ದಿಗೆ ಪುಷ್ಠಿ ಕೊಟ್ಟಿತ್ತು. ಆದರೆ, ಅವರು ಈ ವಿಷಯವನ್ನು ನಿರಾಕರಿಸುತ್ತಲೇ ಬಂದಿದ್ದರು. ಇದೀಗ ಸದ್ದಿಲ್ಲದೇ ಎಂಗೇಜ್ ಮೆಂಟ್ ಕೂಡ ಮಾಡಿಕೊಂಡಿದ್ದಾರೆ.
 
ಈ ಜೋಡಿಯ ನಿಶ್ಚಿತಾರ್ಥ ಸಮಾರಂಭಂದಲ್ಲಿ ರಾಜಕೀಯ ಗಣ್ಯರು, ಸಿನಿ ತಾರೆಯರು ಹಾಗೂ ಕ್ರೀಡಾಪಟುಗಳ ಭಾಗಿಯಾಗಿದ್ದರು. ಪರಿಣಿತಿ ಸಹೋದರಿ ಪ್ರಿಯಾಂಕಾ ಚೋಪ್ರಾ, ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ಇಡೀ ಸಮಾರಂಭದಲ್ಲಿ ಮಿಂಚಿದ್ದಾರೆ. ದೆಹಲಿಯ (Delhi) ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್ ನಲ್ಲಿ ಪರಿಣಿತಿ ಚೋಪ್ರಾ ಹಾಗೂ ರಾಘವ್ ಉಂಗುರ ಬದಲಾಯಿಸಿಕೊಂಡಿದ್ದಾರೆ.

ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬದಿಂದ 150 ಜನರಷ್ಟೇ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪರಿಣಿತಿ, ಮನೀಷ್ ಮಲ್ಹೋತ್ರಾ ಬಳಿ ಸರಳವಾಗಿ ಡ್ರೆಸ್ ಮಾಡಿಸಿದ್ದರು. ರಾಘವ್, ಅವರ ಚಿಕ್ಕಪ್ಪ ಪವನ್ ಸಚ್‌ದೇವ್ ಬಳಿ ನಿಶ್ಚಿತಾರ್ಥಕ್ಕೆ ಔಟ್ ಫಿಟ್ ಡಿಸೈನ್ ಮಾಡಿಸಲಾಗಿತ್ತು.‌

ನಟಿ ಪರಿಣಿತಿ, ರಾಜಕಾರಣಿ ರಾಘವ್ ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ದಂಪತಿ, ಆಲಿಯಾ ಭಟ್, ಕತ್ರಿನಾ ಕೈಫ್, ನಟ ಅಕ್ಷಯ್‌ ಕುಮಾರ್ ಸೇರಿದಂತೆ ಹಲವು ಸಿನಿಮಾ ಸ್ಟಾರ್‌ಗಳು, ರಾಜಕೀಯ ಗಣ್ಯರು ಭಾಗಿಯಾಗಿದ್ದರು.

ಹರಿಯಾಣದಲ್ಲಿ ನಡೆದ ಶೂಟಿಂಗ್ ವೇಳೆ ಇಬ್ಬರೂ ಪರಿಚಯವಾಗಿ ಆನಂತರ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪೋಷಕರ ಒಪ್ಪಿಗೆ ಪಡೆದುಕೊಂಡೇ ಇಬ್ಬರೂ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ರಾಘವ್ ಚಡ್ಡಾ ಆಪ್ ಪಕ್ಷದಿಂದ ಎಂಪಿ ಆಗಿದ್ದರೆ, ಪರಿಣಿತಿ ಲೇಡಿಸ್ ವರ್ಸಸ್ ರಿಕ್ಕಿ ಬೇಲ್ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು ಈಗಲೂ ಸಿನಿಮಾ ರಂಗದಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ