
ವಿಟ್ಲ ಐಪಿಎಲ್ ಕ್ರಿಕೆಟ್ ಪಂದ್ಯಾಟ ಬೆಟ್ಟಿಂಗ್ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದುರೆಯ ಎಂಬಲ್ಲಿ ನಿನ್ನೆ ನಡೆದಿದೆ. ಬಂಧಿತರನ್ನು ಕರುಣಾಕರ, ಶರತ್ ಕುಮಾರ್, ಅವಿನಾಶ್ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಸುಮಾರು 9 ರ ಸಮಯಕ್ಕೆ ಪೊಲೀಸರಿಗೆ ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರು ಸಂದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದ್ರಿಯ ಎಂಬ ಸ್ಥಳಕ್ಕೆ ದಾಳಿ ನಡೆಸಿದಾಗ ಮೂರು ಜನ ಆರೋಪಿಗಳು ಮತ್ತು ಲ್ಯಾಪ್ಟಾಪ್ ಮೂಲಕ ಲಕ್ನೋ ಹಾಗೂ ಹೈದರಾಬಾದ್ ತಂಡಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾಟಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದರು.
ತಕ್ಷಣವೇ ಮೂವರನ್ನು ವಶಕ್ಕೆ ಪಡೆದ ಪೊಲೀಸರು ಬೆಕ್ಕಿಗೆ ಉಪಯೋಗಿಸುತ್ತಿದ್ದ ಲ್ಯಾಪ್ಟಾಪ್ 14500 ರೂ ನಗದು ಹಲವು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ವಸ್ತುವಿನ ಒಟ್ಟು ಮೌಲ್ಯ 47000 ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist