ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಭೆ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ತೀರ್ಮಾನ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ. ರಾಹುಲ್ ಗಾಂಧಿ ಚೇಲಾಗಳು ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ-ಹಿರಿಯ ನಾಯಕ ಪೃಥ್ವಿರಾಜ್ ಚೌಹಾಣ್ ರಿಂದ ವಾಗ್ದಾಳಿ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಆಚರಣೆ ಮಾಡುವ ಕುರಿತಂತೆ ಸಭೆ ನಂತರ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಹೇಳಿದ್ದಾರೆ.

ಅವರಿಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಾಮರಾಜಪೇಟೆ ಮೈದಾನದ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು ಕೋರ್ಟ್ ತೀರ್ಪು ಬಂದಿದೆ. ನಾಳೆ ಸಭೆ ಮಾಡುತ್ತೇವೆ. ಕಂದಾಯ ಸಚಿವರು, ಅಡ್ವೋಕೇಟ್ ಜನರಲ್ ಜೊತೆ ಸಭೆ ಮಾಡಿ ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡ್ತೇವ ಎಂದು ಹೇಳಿದರು.

ಕಂದಾಯ ಸಚಿವ ಆರ್. ಅಶೋಕ್ ಅವರು ಬಹುಜನರ ಬೇಡಿಕೆ ಈಡೇರಿಸುವ ಕೆಲಸ ಮಾಡುತ್ತೇವೆ ಕೋರ್ಟ್ ತೀರ್ಪು ಸಂತೋಷ ತಂದಿದೆ.. ಇದು ಬಹುಧರ್ಮಿಯರ ದೇಶ. ಅರ್ಜಿ ಪರಿಶೀಲನೆ ಮಾಡಬಹುದು ಎಂದು ಕೋರ್ಟ್ ಹೇಳಿದೆ. ಕಂದಾಯ ಇಲಾಖೆಗೆ ಅವಕಾಶ ನೀಡಿದೆ. ಪೂರ್ತಿ ಮಾಹಿತಿ ಓದಿದ ಬಳಿಕ ಸರ್ಕಾರ ನಿರ್ಧಾರ ಪ್ರಕಟ ಮಾಡಲಿದೆ ಅದಕ್ಕೂ ಮುನ್ನ ಸಿಎಂ ಮತ್ತು ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೇವೆ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದು ಎನ್ನೋದು ಸ್ಪಷ್ಟ ಆಗಿದೆ. ಮುಂಬರುವ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಮಾಡ್ತೇವೆ. ಇಂದು ಖುಷಿ ಆಗಿದೆ. ಒಳ್ಳೆಯ ತೀರ್ಪು. ನೆನ್ನೆ ಸ್ವಲ್ಪ ಬೇಸರ ಆಗಿತ್ತು. ಕಂದಾಯ ಭೂಮಿ ಅಲ್ಲ ಎಂದಿದ್ದಕ್ಕೆ ಬೇಸರ ಆಗಿತ್ತು. ಇಂದು ಖುಷಿ ಆಗಿದೆ. ಕಂದಾಯ ಇಲಾಖೆಗೆ ಈ ಜಾಗ ಸೇರಿದ್ದು ಎಂದು ತಿಳಿದು ಖುಷಿ ಆಗಿದೆ ಎಂದು ಹೇಳಿದರು.

ಕೋರ್ಟ್ ತೀರ್ಪು ಸ್ವಾಗತಾರ್ಹ:  ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೋರಿದ್ದ ಅರ್ಜಿಯ ಅನುಮತಿ ಬಗ್ಗೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಈ ಕುರಿತು ಅವರು ಹೇಳಿಕೆ ನೀಡಿದ್ದಾರೆ. ಹಿಂದೂಗಳ ಧಾರ್ಮಿಕ ಆಚರಣೆ ಸ್ವಾತಂತ್ರ್ಯ ಯಾರೊಬ್ಬರ ಬಳಿ ಕೇಳಿ ಪಡೆಯುವ ಭಿಕ್ಷೆ ಅಲ್ಲ ಅದು ಜನ್ಮ ಸಿದ್ದ ಹಕ್ಕು ಅನ್ನೋದನ್ನು ಇಂದಿನ ತೀರ್ಪು ಎತ್ತಿ ಹಿಡಿದಿದೆ. ಕಂದಾಯ ಇಲಾಖೆಗೆ ಸೇರಿದ್ದ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಸಮಿತಿಗಳಿಗೆ ಅನುಮತಿ ನೀಡಲು ನಾನು ಈಗಾಗಲೇ ಘನ ಸರಕಾರಕ್ಕೆ ಪತ್ರ ಬರೆದಿದ್ದು ಅದು ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕೂಡಾ ಆಗಿತ್ತು. ಇಂದಿನ  ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಆ ನಿಟ್ಟಿನಲ್ಲೇ ಇದೆ.

ಆಟದ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿನ್ನೆ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ್ದ ತೀರ್ಪಿನಿಂದ ನಿರಾಶರಾಗಿದ್ದ ನಮಗೆ ಇಂದಿನ ತೀರ್ಪು ಮತ್ತೊಮ್ಮೆ ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಿದೆ ಮತ್ತು ಸಂತಸ ತಂದಿದೆ .

ಗಣೇಶೋತ್ಸವ ಆಚರಣೆಯ ಹಿಂದಿನ ಉದ್ದೇಶ ಸಮಾಜದ ಏಕತೆ. ಇದನ್ನು ಅರ್ಥ ಮಾಡಿಕೊಳ್ಳದ ಮತಾಂಧ ಶಕ್ತಿಗಳಿಗೆ ದೇಶ ಭಕ್ತಿಯ ಸದಾಚಾರ, ಸದ್ಬುದ್ಧಿ ಕೊಡಲೆಂದು ವಿಘ್ನ ವಿನಾಶಕನಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ