ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮಾವೇಶಗಳಲ್ಲಿ ಹಾಜರಾಗದ ಜನತೆ: ಚಿಂತೆಯಲ್ಲಿ ಬಿಜೆಪಿ

Twitter
Facebook
LinkedIn
WhatsApp
ಸಮಾವೇಶಗಳಲ್ಲಿ ಹಾಜರಾಗದ ಜನತೆ: ಚಿಂತೆಯಲ್ಲಿ ಬಿಜೆಪಿ

ಬೆಂಗಳೂರು: ಬಿಜೆಪಿ ಸಮಾವೇಶ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನರ ಹಾಜರಾತಿ ಕಡಿಮೆಯಾಗಿರುವುದು ಪಕ್ಷವು ಚಿಂತೆಗೊಳಗಾಗುವಂತೆ ಮಾಡಿದೆ. ವಿಧಾನಸಭಾ ಚುಣಾವಣೆಗಾಗಿ ಬಿಜೆಪಿ ಹಲವಾರು ತಂತ್ರಗಳನ್ನು ಬಳಸಿ ಜನರನ್ನು ತಮ್ಮತ್ತ ಸೆಳೆಯಲು ನೋಡುತ್ತಿದ್ದರೂ ಅದರಲ್ಲಿ ವಿಫಲವಾದಂತಿದೆ. ಇತ್ತೀಚೆಗೆ ಬಿಜೆಪಿಯ ಸಮಾವೇಶಗಳಲ್ಲಿ ಖಾಲಿ ಕುರ್ಚಿಗಳ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪಕ್ಷವು ಮುಜುಗರಕ್ಕೊಳಗಾಗಿದೆ.

ಬಳ್ಳಾರಿಯಲ್ಲಿ ನಡೆದ ಪಕ್ಷದ ಎಸ್‌ಸಿ/ಎಸ್‌ಟಿ ಸಮಾವೇಶದಲ್ಲಿ ಜನಸಂದಣಿ ನಿರೀಕ್ಷೆಗಿಂತ ತುಂಬಾ ಕಡಿಮೆ ಇತ್ತು.
ಅಲ್ಲದೆ, ಇತ್ತೀಚೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ಮೋದಿ ಭಾಷಣ ಮಾಡಿದ ಸಾರ್ವಜನಿಕ ಕಾರ್ಯಕ್ರಮದಲ್ಲೂ ಜನರ ಸಂಖ್ಯೆ ಕಡಿಮೆಯಿತ್ತು. ಅದರಲ್ಲಿ ಕೇವಲ 50,000ದಷ್ಟು ಜನರು ಮಾತ್ರ ಸೇರಿದ್ದರು.
ಇನ್ನು ಉಡುಪಿಯ ಕಾಪುವಿನಲ್ಲಿ ಬಿಜೆಪಿಯ ಭಾರೀ ಪ್ರಚಾರದ ಜನಸಂಕಲ್ಪ ಯಾತ್ರೆಗೂ ಜನರಿಂದ ಕಳಪೆ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ನಡುವೆ ಸಮಾವೇಶಗಳಿಗೆ ಹೆಚ್ಚಿನ ಜನರನ್ನು ಕರೆತರಲು ಬಸ್ ಗಳನ್ನು ಕಳುಹಿಸಲಾಗಿತ್ತಾದರೂ, ಜನರು ಇಲ್ಲದ ಕಾರಣ ಅವುಗಳಲ್ಲಿ ಅನೇಕ ಬಸ್ ಗಳು ಖಾಲಿಯಾಗಿ ವಾಪಸ್ಸಾಗಿದ್ದವು ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸಮಾವೇಶಗಳಲ್ಲಿನ ವೀಡಿಯೊಗಳು ಮತ್ತು ಫೋಟೋಗಳಲ್ಲಿ ಖಾಲಿ ಕುರ್ಚಿಗಳು ಕಂಡು ಬಂದಿವೆ. ಅಸಮರ್ಪಕ ಆಡಳಿತ  ಹಾಗೂ ಭ್ರಷ್ಟಾಚಾರವೇ ಇದಕ್ಕೆ ಕಾರಣ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ