ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರದಿಂದ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ : ಏನಿದೆ? ಏನಿಲ್ಲ? ಇಲ್ಲಿದೆ ಡೀಟೇಲ್ಸ್

Twitter
Facebook
LinkedIn
WhatsApp
ಸರ್ಕಾರದಿಂದ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ : ಏನಿದೆ? ಏನಿಲ್ಲ? ಇಲ್ಲಿದೆ ಡೀಟೇಲ್ಸ್

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ.

ಬೆಂಗಳೂರಲ್ಲಿ 10 ಮತ್ತು 12 ನೇ ತರಗತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಬಂದ್‌ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಅಲ್ಲದೇ ನೈಟ್‌ ಕರ್ಪ್ಯೂ ಮುಂದುವರಿಸುವುದರ ಜೊತೆಗೆ ರಾಜ್ಯದಾದ್ಯಂತ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ.

ನಾಳೆ ರಾತ್ರಿಯಿಂದಲೇ ಹೊಸ ರೂಲ್ಸ್‌ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ಮತ್ತು ಸುಧಾಕರ್ ಅವರು ಜಂಟಿ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದರು.

ಕೊರೊನಾ ಸೋಂಕು ಎರಡರಿಂದ ಮೂರು ದಿನದಲ್ಲಿ ದುಪ್ಪಟ್ಟಾಗುತ್ತಿದೆ. ಐದಾರು ದಿನದಲ್ಲಿ ನಿತ್ಯವೂ ಹತ್ತು ಸಾವಿರ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ೨೦ರಿಂದ ೪೦ ವರ್ಷದವರನ್ನೇ ಹೆಚ್ಚಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಇತರ ಜಿಲ್ಲೆಗಳಿಗೆ ಪ್ರತ್ಯೇಕ ರೂಲ್ಸ್‌ ಜಾರಿ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ 10 ಮತ್ತು12 ನೇ ತರಗತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಎರಡು ವಾರದ ಮಟ್ಟಿಗೆ ಮುಚ್ಚಲಾಗುತ್ತದೆ. ಉಳಿದ ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌ ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ. ಜನವರಿ 5 ರಿಂದ ರಾತ್ರಿ 10 ಗಂಟೆಯಿಂದಲೇ ಹೊಸ ರೂಲ್ಸ್‌ ಜಾರಿಗೆ ಬರಲಿದೆ. ಜನವರಿ 6 ರಿಂದ ಎರಡು ದಿನಗಳ ಕಾಲ ವೀಕೆಂಡ್‌ ಕರ್ಪ್ಯೂ ಜಾರಿಗೆ ಬರಲಿದೆ. ಸದ್ಯ ಜಾರಿಯಲ್ಲಿರುವ ನೈಟ್‌ ಕರ್ಪ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

ಮಾಲ್‌, ಚಿತ್ರಮಂದಿರ, ಪಬ್‌, ಬಾರ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶೇ. 50 ರಷ್ಟು ಸಾಮರ್ಥ್ಯಕ್ಕೆ ಅನುಮತಿ ನೀಡಲಾಗಿದೆ.

ಮದುವೆ ಹೊರಾಂಗಣ 200, ಒಳಾಂಗಣ 100 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಕಡೆಗಳಲ್ಲಿಯೂ ಎರಡು ಡೋಸ್‌ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಲೇ ಬೇಕು.

ಇನ್ನು ಹೊರರಾಜ್ಯದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. ಸದ್ಯದ ಈ ನಿಯಮ ಮುಂದಿನ ಎರಡು ವಾರಗಳ ಕಾಲ ಜಾರಿಯಲ್ಲಿರಲಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು