ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರಿ ಶಾಲೆ ಆವರಣದಲ್ಲಿ ಯುವಕನ‌ ಹತ್ಯೆ ಕೇಸ್; ಇಬ್ಬರು ಆರೋಪಿಗಳ ಬಂಧನ

Twitter
Facebook
LinkedIn
WhatsApp
belagavi school murder

ಬೆಳಗಾವಿ: ನಿನ್ನೆ(ಮೇ.18) ಬೆಳಗ್ಗೆ ಮಾರಿಹಾಳ ಸರ್ಕಾರಿ ಶಾಲೆಯ ಕೊಠಡಿ ಎದುರು ಮಹಾಂತೇಶ ಕರಲಿಂಗಣ್ಣವರ್ (24) ಮೃತದೇಹ ಪತ್ತೆಯಾಗಿತ್ತು. ಯುವಕನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಯಾರೂ ಹತ್ಯೆ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮಾರಿಹಾಳ ಠಾಣೆ ಪೊಲೀಸರು, ಘಟನೆ ನಡೆದ 24 ಗಂಟೆಗಳೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಳೇಭಾವಿ ನಿವಾಸಿ ಅಕ್ಷಯಕುಮಾರ್ ಕೊಣಕೇರಿ(23), ಮಾರಿಹಾಳ ನಿವಾಸಿ ರಾಜೇಸಾಬ್ ಮುಲ್ಲಾ(23) ಬಂಧನಕ್ಕೊಳಗಾದ ಆರೋಪಿಗಳು. ನಾಲ್ಕು ದಿನಗಳ ಹಿಂದೆ ಕೊಲೆಯಾದ ಮಹಾಂತೇಶ ಹಾಗೂ ಆರೋಪಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವೇಳೆ ಕೊಲೆಯಾದ ಮಹಾಂತೇಶ್ ರಾಜೇಸಾಬ್‌ಗೆ ಧಮ್ಕಿ ಹಾಕಿದ್ದನಂತೆ. ಇದೇ ವೈಷಮ್ಯವಿಟ್ಟುಕೊಂಡು ಇಬ್ಬರು ಆರೋಪಿಗಳು ಹತ್ಯೆ ಮಾಡಿ, ಪರಾರಿಯಾಗಿದ್ರು.

ಇನ್ನು ಕೊಲೆಯಾದ ಮಹಾಂತೇಶ ಬೆಳಗ್ಗೆ 7 ಗಂಟೆಗೆ ಬೆಳಗಾವಿಗೆ ಕೆಲಸಕ್ಕೆ ಹೋಗಿ, ಸಂಜೆ 7 ಗಂಟೆ ಹೊತ್ತಿಗೆ ಮನೆಗೆ ವಾಪಸ್ ಆಗುತ್ತಿದ್ದ. ಆದ್ರೆ, ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಮಹಾಂತೇಶನಿಗೆ ಅಣ್ಣ ಫೋನ್ ಮಾಡಿದ ವೇಳೆ ಬಸ್ ನಿಲ್ದಾಣ ಬಳಿ ಇದ್ದೀನಿ ಎಂದಿದ್ದ ಮಹಾಂತೇಶ, ಬಳಿಕ ಮನೆಗೆ ವಾಪಸ್ ಆಗಿರಲಿಲ್ಲ. ಸ್ನೇಹಿತರ ಜೊತೆ ಎಲ್ಲಿಯಾದರೂ ಹೋಗಿರಬೇಕು ಎಂದು ಮನೆಯವರು ನಿದ್ದೆಗೆ ಜಾರಿದ್ದರು. ನಿನ್ನೆ(ಮೇ.19) ಬೆಳ್ಳಂಬೆಳಗ್ಗೆ ಮಾರಿಹಾಳ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿ ಎದುರು ಮಹಾಂತೇಶ ಕೊಲೆಯಾಗಿದ್ದಾನೆ ಎಂಬ ಸುದ್ದಿ ಗೊತ್ತಾಗಿದೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಡಿಸಿಪಿ ಸ್ನೇಹಾ ಹಾಗೂ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮೃತ ಮಹಾಂತೇಶ ತಂದೆ ರುದ್ರಪ್ಪ ಸಹ 18 ವರ್ಷಗಳ ಹಿಂದೆ ಹತ್ಯೆಯಾಗಿದ್ದ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ರುದ್ರಪ್ಪನನ್ನು ಹತ್ಯೆ ಮಾಡಲಾಗಿತ್ತು. ತಂದೆಯ ಕೊಲೆ ಆರೋಪಿಗಳೇ ಹತ್ಯೆ ಮಾಡಿರಬಹುದು ಎಂದು ಮಹಾಂತೇಶ್​ ತಾಯಿ ಶಂಕೆ ವ್ಯಕ್ತಪಡಿಸಿದ್ದರು. ಇನ್ನು ಮಾರಿಹಾಳ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಪಾಳು ಬಿದ್ದಿದ್ದು ಸರಿಯಾದ ಕಾಂಪೌಂಡ್ ಗೇಟ್ ಹಾಗೂ ಬೆಳಕಿನ ವ್ಯವಸ್ಥೆ ಇಲ್ಲ. ರಾತ್ರಿಯಾಯಿತೆಂದರೆ ಶಾಲಾ ಆವರಣದಲ್ಲಿ ಪುಂಡರು ಎಂಟ್ರಿ ಕೊಟ್ಟು ಮದ್ಯಪಾನ ಸೇರಿ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರಂತೆ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಸಂಬಂಧ ಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಾಲಾ ಮುಖ್ಯೋಪಾಧ್ಯಾಯರು ಆರೋಪಿಸಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡ ಮಾರಿಹಾಳ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಜ್ಞಾನದೇಗುಲವಾದ ಶಾಲಾ ಆವರಣದಲ್ಲಿಯೇ ಈ ರೀತಿಯ ಘಟನೆ ನಡೆದಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ನಡೆದು ಕೇವಲ 24 ಗಂಟೆಗಳೊಳಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist