ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್!
Twitter
Facebook
LinkedIn
WhatsApp
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ದೇಶಾದ್ಯಂತ ವೈರಲ್ ಆಗಿರುವ ಬೆನ್ನಲ್ಲೇ ಇತರ ರಾಜಕೀಯ ನಾಯಕರು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ.
ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್ ಸುದ್ದಿವಾಹಿನಿಗಳ, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿ ವರದಿ ಅಥವಾ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
ವಕೀಲ ಎಂ. ವಿನೋದ್ ಕುಮಾರ್ ಮೂಲಕ ಕೆ.ಇ. ಕಾಂತೇಶ್ ಬೆಂಗಳೂರಿನ ಸಿಸಿಎಚ್-11 6ನೇ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಸಾಮಾಜಿಕ ಜಾಲತಾಣಗಳು ಮತ್ತು 50ಕ್ಕೂ ಹೆಚ್ಚು ಸುದ್ದಿಮಾಧ್ಯಮಗಳಿಗೆ ಕಾಂತೇಶ್ ವಿರುದ್ಧ ಯಾವುದೇ ಮಾನಹಾನಿಕಾರದ ಸುದ್ದಿ ಅಥವಾ ವೀಡಿಯೋ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಜಾರಿಗೊಳಿಸಿದೆ.