ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಮಾಜಿಕ ಜಾಲತಾಣದ ಮೂಲಕ ಮತ್ತೆ ವಿವಾದ ಸೃಷ್ಟಿಸಿದ ನಟಿ ಕಂಗನಾ ರಣಾವತ್.

Twitter
Facebook
LinkedIn
WhatsApp
ಸಾಮಾಜಿಕ ಜಾಲತಾಣದ ಮೂಲಕ  ಮತ್ತೆ ವಿವಾದ ಸೃಷ್ಟಿಸಿದ ನಟಿ ಕಂಗನಾ ರಣಾವತ್.

ಬಾಲಿವುಡ್​ ನಟಿ ಕಂಗನಾ ರಣಾವತ್​​ ಇತ್ತೀಚೆಗೆ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತ ಹಲವರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ನಿನ್ನೆ ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಇಂದಿರಾಗಾಂಧಿಯವರ ಹೆಸರನ್ನು ಉಲ್ಲೇಖಿಸದೆ ಒಂದು ಬರಹ ಹಾಕಿದ್ದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆದ ಬೆನ್ನಲ್ಲೇ ಸ್ಟೋರಿ ಹಾಕಿದ್ದ ಅವರು, ‘ಇಂದು ಬಹುಶಃ ಖಲಿಸ್ತಾನಿ ಭಯೋತ್ಪಾದಕರು ಸರ್ಕಾರ ತೋಳನ್ನು ತಿರುಚಿತ್ತರಬಹುದು. ಆದರೆ ಈ ಸಂದರ್ಭದಲ್ಲಿ ನಾವು ಒಬ್ಬ ಮಹಿಳೆಯರನ್ನು ಮರೆಯುವಂತಿಲ್ಲ. ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಅವರು ಖಲಿಸ್ತಾನಿ ಉಗ್ರರನ್ನು ಸೊಳ್ಳೆಗಳಂತೆ ತಮ್ಮ ಬೂಟಿನಡಿ ಹಾಕಿ ಹೊಸಕಿದ್ದರು. ಖಲಿಸ್ತಾನಿಗಳು ದೇಶವನ್ನು ಒಡೆಯಲು ಬಿಡಲಿಲ್ಲ’ ಎಂದು ಕಂಗನಾ ಹೇಳಿದ್ದರು.

ಈ ಇನ್​ಸ್ಟಾಗ್ರಾಂ ಸ್ಟೋರಿ ದೊಡ್ಡ ವಿವಾದ ಸೃಷ್ಟಿಸಿದೆ. ಇಲ್ಲಿ ಇಡೀ ಸಿಖ್​ ಸಮುದಾಯವನ್ನು ಅವರು ಖಲಿಸ್ತಾನಿ ಭಯೋತ್ಪಾದಕರು ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ, ಅಕಾಲಿ ದಳ ನಾಯಕ, ದೆಹಲಿ ಸಿಖ್​ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷ ಮಂಜಿಂದರ್ ಸಿಂಗ್​ ಸಿರ್ಸಾ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಂಗನಾ ರಣಾವತ್​ ಹೇಳಿಕೆ ಸರಿಯಾಗಿಲ್ಲ. ಇವರು ಉದ್ದೇಶಪೂರ್ವಕವಾಗಿಯೇ ರೈತರ ಪ್ರತಿಭಟನೆಯನ್ನು ಖಲಿಸ್ತಾನಿ ಚಳವಳಿ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಂಗನಾ ರಣಾವತ್​ ಅವರದ್ದು ಅತ್ಯಂತ ಕೀಳುಮಟ್ಟದ ಮನಸ್ಥಿತಿ. ಖಲಿಸ್ತಾನಿ ಭಯೋತ್ಪಾದಕರಿಂದಾಗಿ ಇಂದು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕಾಯಿತು ಎಂದು ಆಕೆ ಹೇಳಿದ್ದು ಇಡೀ ಸಿಖ್​ ಸಮುದಾಯಕ್ಕೆ ಮಾಡಿದ ಅವಮಾನ. ಆಕೆ ದ್ವೇಷದ ಕಾರ್ಖಾನೆ.  ಕಂಗನಾ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆಕೆಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ಮತ್ತು ಭದ್ರತೆಯನ್ನು ವಾಪಸ್​ ಪಡೆಯಬೇಕು. ನಟಿಯನ್ನು ಒಂದೋ ಜೈಲಿನಲ್ಲಿಡಿ ಅಥವಾ ಮಾನಸಿಕ ರೋಗದ ಆಸ್ಪತ್ರೆಯಲ್ಲಿ ಬಿಡಿ ಎಂದು ಸಿರ್ಸಾ ಆಗ್ರಹಿಸಿದ್ದಾರೆ.

ಕಂಗನಾ ರಣಾವತ್​ ವಿವಾದಾತ್ಮಕವಾಗಿ ಮಾತನಾಡುತ್ತಿರುವುದು ಇದೇ ಮೊದಲೇನೂ ಅಲ್ಲ. ಮಹಾತ್ಮ ಗಾಂಧಿ ಸ್ವಾತಂತ್ರ್ಯ ಹೋರಾಟದ ಬಗ್ಗೆಯೂ ಪ್ರಶ್ನೆ ಮಾಡಿದ್ದರು. ಒಂದು ಕೆನ್ನೆಗೆ ಹೊಡೆದಾಕ್ಷಣ ಇನ್ನೊಂದು ಕೆನ್ನೆ ತೋರಿಸಿದ್ದಕ್ಕೆ ಸಿಕ್ಕಿದ್ದಲ್ಲ ಸ್ವಾತಂತ್ರ್ಯ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿದ್ದ ಕಂಗನಾ ರಣಾವತ್​, ಸುಭಾಷ್​ ಚಂದ್ರ ಬೋಸ್​, ಭಗತ್​ ಸಿಂಗ್​​ರಂತಹ ಕ್ರಾಂತಿಕಾರಿಗಳಿಗೆ ಮಹಾತ್ಮ ಗಾಂಧಿ ಬೆಂಬಲ ಸಿಕ್ಕಿರಲಿಲ್ಲ. ಸುಭಾಷ್​ ಚಂದ್ರ ಬೋಸ್​ರನ್ನು ಬ್ರಿಟಿಷರಿಗೆ ಒಪ್ಪಿಸಲು ಗಾಂಧಿ, ನೆಹರು ಸಿದ್ಧರಾಗಿದ್ದರು ಎಂದೂ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಹೇಳಿಕೊಂಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು