ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Twitter
Facebook
LinkedIn
WhatsApp
187132216 319501412877938 363349543192303813 n 1

ಮೈಸೂರು: ದೇಶದ ಬೆನ್ನೇಲುಬು ರೈತ(Former), ಆದರೆ ಆತನ ಗೋಳು ಕೇಳುವವರಾರು, ಒಮ್ಮೆ ಬೆಳೆ ಚೆನ್ನಾಗಿ ಬಂದರೆ, ಸರಿಯಾದ ಬೆಲೆ ಸಿಗಲ್ಲ. ಬೆಲೆ ಸರಿಯಾಗಿ ಸಿಕ್ಕರೆ, ಬೆಳೆ ಚೆನ್ನಾಗಿ ಬರಲ್ಲ. ಎಷ್ಟೋ ಸಾಲಸೋಲ ಮಾಡಿ ಬೆಳೆದ ಬೆಳೆ, ಫಲ ಕೊಡದೇ ಇದ್ದಾಗ ರೈತನ ಪಾಡು ಹೇಳತೀರದು. ಈ ಕಾರಣಕ್ಕೆ ಎಷ್ಟೋ ರೈತರು ನೇಣಿಗೆ ಶರಣಾಗಿದ್ದಾರೆ. ಅದರಂತೆ ಇದೀಗ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾಲಕ್ಕಿಗೌಡ (65) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

3 ಎಕರೆ ಜಮೀನು ಹೊಂದಿದ್ದ ಯಾಲಕ್ಕಿ ಗೌಡ, ತಂಬಾಕು ಬ್ಯಾರನ್ ಹೊಂದಿದ್ದರು. ಹೊಗೆಸೊಪ್ಪು, ಶುಂಠಿ ಬೆಳೆ ಬೆಳೆದಿದ್ದ ರೈತ. ಕೃಷಿ ಚಟುವಟಿಕೆಗಾಗಿ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿಯ ಐಓಬಿ ಬ್ಯಾಂಕಿನಲ್ಲಿ 12ಲಕ್ಷ ಹಾಗೂ ಗ್ರಾಮದಲ್ಲಿ 6 ಲಕ್ಷ ಕೈ ಸಾಲ ಪಡೆದಿದ್ದರು. ಆದರೆ, ನಾಲ್ಕು ವರ್ಷಗಳಿಂದ ಬೆಳೆ ಕೈ ಕೊಟ್ಟು ನಷ್ಟ ಅನುಭವಿಸಿದ ಕಾರಣ, ಸಾಲ ತೀರಿಸಲಾಗಿಲ್ಲ. ಇದರಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಕರ್ನಾಟಕದಲ್ಲಿ 2019 ರಿಂದ 2022ರ ನಡುವೆ 3,173 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2022-23ನೇ ಸಾಲಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಶೇ. 70ರಷ್ಟು ಕಡಿಮೆಯಾಗಿವೆ. ಈ ವರ್ಷದಲ್ಲಿ 188 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 98 ಮಂದಿಗೆ ಪರಿಹಾರ ಧನ ವಿತರಣೆ ಬಾಕಿ ಉಳಿಸಿಕೊಂಡಿದೆ. ಉತ್ತಮ ಮಳೆಯಿಂದಾಗಿ ಬೆಳೆಗೆ ನೀರಿನ ಕೊರತೆ ಎದುರಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ