ಶಿವಮೊಗ್ಗ: ಪತ್ನಿಯ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಯೊರ್ವ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರ್ಘಟನೆ ತಾಲೂಕಿನ ಕುಂಚೇನಳ್ಳಿ ಮೇಲಿನ ತಾಂಡದಲ್ಲಿ ನಡೆದಿದೆ.ಲೋಕೇಶ್ ನಾಯ್ಕ (38) ಮೃತ ವ್ಯಕ್ತಿ. ಸಾಲಬಾಧೆ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸಹಕಾರ ಸಂಘ ಹಾಗೂ ಇತರೇ ಹಣಕಾಸು ಸಂಸ್ಥೆಗಳಿಂದ ಲೋಕೇಶ್ ಸುಮಾರು ಎರಡೂವರೆ ಲಕ್ಷ ಸಾಲ ಪಡೆದಿದ್ದರು. ಆದರೆ, ಸಕಾಲದಲ್ಲಿ ಸಾಲ ಮರುಪಾವತಿ ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.ಲೋಕೇಶ್ ತಮ್ಮ ಕುಂಚೇನಹಳ್ಳಿಯಲ್ಲಿರುವ 4.38 ಎಕರೆ ಜಮೀನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆ ಅಕಾಲಿಕ ಮಳೆಗೆ ಸಿಲುಕಿ ಸಂಪೂರ್ಣ ನಾಶವಾಗಿತ್ತು. ಇದರಿಂದಾಗಿ ಬೆಳೆಗೆ ಮಾಡಿಕೊಂಡಿದ್ದ ಸಾಲದ ಹೊರೆ ಹೆಚ್ಚಾಗಿ ಮನನೊಂದಿದ್ದರು.ಜೊತೆಗೆ ಮಾರಿಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ತರುವಂತೆ ಪತ್ನಿ ಸುಮಿತ್ರ ಬಾಯಿಯು ಲೋಕೇಶ್‌ಗೆ ಪಟ್ಟಿ ನೀಡಿದ್ದರು. ಆದರೆ, ಹಬ್ಬದ ಸಾಮಗ್ರಿ ಕೊಳ್ಳಲು ಹಣವಿಲ್ಲದೇ ಬರಿಗೈಯಲಿ ಮನೆಗೆ ಮರಳಿದ್ದ. ಈ ವಿಚಾರವಾಗಿ ಪತಿ ಪತ್ನಿ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
ಪತ್ನಿ ಸುಮಿತ್ರ ಬಾಯಿ ಜತೆ ಜಗಳಕ್ಕೆ ಇಳಿದ ಲೋಕೇಶ್ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ತಾನೂ ನೇಣು ಬಿಗಿದುಕೊಂಡು ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಸುಮಿತ್ರ ಬಾಯಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist