ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಆ.29ಕ್ಕೆ ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ನಿರ್ದೇಶನ

Twitter
Facebook
LinkedIn
WhatsApp
ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಅನುದಾನ ಬಿಡುಗಡೆ

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್, ಆ.29ರವರೆಗೆ ವಿಚಾರಣೆ ಮುಂದೂಡುವಂತೆ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ. 

ಬೆಂಗಳೂರು (ಆ.19): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್‌ನಿಂದ ಯಾವುದೇ ಆದೇಶಗಳನ್ನು ನೀಡುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿದ್ದು ಈ ಮೂಲಕ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ನಾಳೆ ವಿಚಾರಣಾ ನ್ಯಾಯಾಲಯದಲ್ಲಿ ಆದೇಶ ನೀಡಿದರೆ ಹೈಕೋರ್ಟ್ ಪ್ರಕ್ರಿಯೆ ನಿಷ್ಪಲವಾಗಲಿದೆ. ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಸೆಷನ್ಸ್ ಕೋರ್ಟ್ ವಿಚಾರಣೆ ಮುಂದೂಡಬೇಕು. ಆಗಸ್ಟ್ 29ರ ವರೆಗೆ ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ. ಅಂದರೆ, ಆಗಸ್ಟ್ 29ರವರೆಗೆ ಸಿಎಂ ಸಿದ್ದರಾಮಯ್ಯ ಸೇಫ್ ಆಗಿರುತ್ತಾರೆ. ಆ.29ರ ವರೆಗೆ ಯಾವುದೇ ವಿಚಾರಣೆ/ ಆದೇಶ ನೀಡದೇ ವಿಚಾರಣೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇದ್ದ ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರ ಖಾಸಗಿ ದೂರುಗಳ ವಿಚಾರಣೆ ಮುಂದೂಡಲು ಹೈಕೋರ್ಟ್ ಸೂಚನೆ ನೀಡಿದೆ.

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ರಾಜ್ಯಪಾಲರು ಯಾರೋ ದಾರಿಯಲ್ಲಿ ಹೋಗುವವರು ನೀಡಿದ ದೂರಿನ ಅನ್ವಯ ಪ್ರಾಸಿಕ್ಯೂಷನ್ ಕುರಿತಂತೆ ಸಿಎಂಗೆ ಷೋಕಾಸ್ ನೊಟೀಸ್ ಜಾರಿ ಮಾಡಿದ್ದಾರೆ. ಅವರಿಗೆ ಸಚಿವ ಸಂಪುಟದಿಂದ ಈ ಪ್ರಾಸಿಕ್ಯೂಷನ್ ಕೈ ಬಿಡುವಂತೆ ನಿರ್ಣಯ ಕೈಗೊಂಡು ನೂರಾರು ಪುಟಗಳ ಉತ್ತರವನ್ನು ಕೊಡಲಾಗಿತ್ತು. ಆದರೆ, ಕ್ಯಾಬಿನೆಟ್ ಸಲಹೆ ಪರಿಗಣಿಸದೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಆದೇಶ ಮಾಡಿದ್ದಾರೆ. ನೂರು ಪುಟಗಳ ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಎರಡು ಪುಟಗಳ ಉತ್ತರ ನೀಡಿದ್ದಾರೆ. ಯಾಕೆ ಪೂರ್ವಾನುಮತಿ ನೀಡಲಾಗಿದೆ ಎಂಬ ಬಗ್ಗೆ  ಒಂದೇ ಒಂದು ಕಾರಣ ನೀಡಿಲ್ಲ. ಸರ್ಕಾರವನ್ನ ಅಸ್ಥಿರಗೊಳಿಸಲು ಇಂತಹ ಕ್ರಮಗೊಳ್ಳಲಾಗಿದೆ ಎಂದು ವಾದ ಮಂಡಿಸಿದರು.

ಸಾರ್ವಜನಿಕ ಸೇವಕರಾಗಿ ಸಿಎಂ ಯಾವುದೇ ಆದೇಶ ಮಾಡಿಲ್ಲ. ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶ ಮಾಡಿಲ್ಲ. ಹೊಸ ಬಿಎನ್ ಎಸ್ಎಸ್ ಕಾಯಿದೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಅಪ್ಲೀಕೇಷನ್ ಆಫ್ ಮೈಂಡ್ ಬಳಕೆ ಮಾಡದೇ ರಾಜ್ಯಪಾಲರು ಆದೇಶ ಮಾಡಿದ್ದಾರೆ. ವಿವೇಚನಾರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ಮಾಡಿದ್ದಾರೆ. ಕ್ಯಾಬಿನೆಟ್ ಆದೇಶವನ್ನ ತಿರಸ್ಕರಿಸಿ ರಾಜ್ಯಪಾಲರು ಆದೇಶ ಮಾಡುವಂತಿಲ್ಲ. ಮಧ್ಯಪ್ರದೇಶ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಕೇಸನ್ನ ರಾಜ್ಯಪಾಲರು ಉಲ್ಲೇಖ ಮಾಡಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದರು. 

ಪಿಸಿ ಆ್ಯಕ್ಟ್ 17A ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಅಬ್ರಹಾಂ, ಪ್ರದೀಪ್ ಕುಮಾರ್ ಹಾಗೂ ಸ್ನೇಹಮಯಿ ಕೃಷ್ಣ ದೂರು ಆಧರಿಸಿ ಆದೇಶ ಮಾಡಲಾಗಿದೆ. ಷೋಕಾಸ್ ನೋಟಿಸ್ ನಲ್ಲಿ ಪ್ರದೀಪ್ ಕುಮಾರ್ ಹಾಗೂ ಸ್ನೇಹಮಯಿ ಕೃಷ್ಣ ಹೆಸರು ಉಲ್ಲೇಖಿಸಿಲ್ಲ. ಟಿ.ಜೆ.ಅಬ್ರಹಾಂ ದೂರಿಗೆ ಸಂಬಂಧಿಸಿದಂತೆ ಮಾತ್ರ ಷೋಕಾಸ್ ನೋಟಿಸ್ ನೀಡಲಾಗಿತ್ತು. ಅಬ್ರಹಾಂ ದೂರು ನೀಡಿದ ದಿನವೇ ಷೋಕಾಸ್ ನೋಟಿಸ್ ನೀಡಲಾಗಿದೆ. 12 ಪ್ರಮುಖ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿಗಳು ಪೆಂಡಿಂಗ್ ಇದೆ. ಆ ಎಲ್ಲಾ ಕೇಸ್ ಗಳ ತನಿಖೆ ಮುಗಿದಿವೆ, ಅವುಗಳ ಬಗ್ಗೆ ಕ್ರಮಕೈಗೊಂಡಿಲ್ಲ. ಕ್ಯಾಬಿನೆಟ್ ಸಲಹೆ ಪಾಲಿಸಬೇಕಿಲ್ಲ ಎಂದು ಆದೇಶದಲ್ಲಿ ರಾಜ್ಯಪಾಲರು ಹೇಳಿದ್ದಾರೆ. ಈಗಾಗಲೇ ಹೈಪವರ್ಡ್ ಕಮಿಷನ್ ಅನ್ನ ರಾಜ್ಯ ಸರ್ಕಾರ ನೇಮಕ ಮಾಡಿದೆ. 

ಕ್ಯಾಬಿನೆಟ್ ನೀಡಿರುವ ಸಲಹೆ ತುಂಬಾ ಕಾನೂನಾತ್ಮಕವಾಗಿದೆ. ಎಲ್ಲಾ ಕಾನೂನು ಪಾಂಡಿತ್ಯ ಇರುವ ಉತ್ತರ ನೀಡಲಾಗಿದೆ. ಆದರೆ, ಸ್ವಾತಂತ್ರವಾಗಿ ನಿರ್ದರಿಸಿದ್ದೇನೆ ಎಂದು ಹೇಳುವ ರಾಜ್ಯಪಾಲರು ಒಂದೇ ಒಂದು ಕಾರಣ ನೀಡಿಲ್ಲ. ಈವರೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದೇಕೆ ಎಂದು ರಾಜ್ಯಪಾಲರು ಹೇಳಿಲ್ಲ ಎಂದು ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ರಾಜ್ಯಪಾಲರ ಮುಂದೆ ಅಭಿಯೋಜನಾ ಮಂಜೂರಾತಿ ಕೋರಿರುವ ಯಾವುದೇ ಅರ್ಜಿ ಬಾಕಿ ಉಳಿದಿಲ್ಲ. 

ಈ ಸಂಬಂಧ ಎಲ್ಲಾ ದಾಖಲೆಗಳು ಹಾಗೂ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದ ನೋಟಿಂಗ್‌ ಮತ್ತು ಕಡತಗಳನ್ನು ಸಲ್ಲಿಸಲಾಗುವುದು. ಆರೋಪಿತ ಅಪರಾಧಗಳನ್ನು ತನಿಖೆ ನಡೆಸಲು ಅನುಮತಿಸಲಾಗಿದೆ. ಹೀಗಾಗಿ, ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಕೋರಿದ್ದಾರೆ ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ