ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

Twitter
Facebook
LinkedIn
WhatsApp
ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ, ಮರ್ಯಾದೆ ಇದೆಯಾ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

ಪರಿಹಾರದ ಬಿಕ್ಕಟ್ಟು ಗಲಭೆಗೆ ಕಾರಣವೆಂಬ ಸಿದ್ದರಾಮಯ್ಯನವರ ಹೇಳಿಕೆ ಕುರಿತಂತೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ಅವರನ್ನು ಕೊಟ್ಟಿದ್ದೇವಲ್ಲ ಅಂತ ಬಹಳ ಬೇಸರ ಆಯಿತು. ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಪಾಕಿಸ್ತಾನ ಮಾಡಿದ ದಾಳಿಗೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಭಾರತದ ಸುದ್ದಿಗೆ ಬರದ ರೀತಿ ಮಾಡಿದ್ದು ಮೋದಿ. ದೇಶದ ಮೇಲೆ ಆಘಾತವಾದಾಗ, ವಿಕೋಪವಾದಾಗ ಆರ್‌ಎಸ್‍ಎಸ್ ಸ್ವಯಂ ಸೇವಕರು ಶ್ರಮ ಪಟ್ಟಿದ್ದಾರೆ. ಸ್ವಯಂ ಸೇವಕರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಏನು ಗೊತ್ತಿಲ್ಲ. ಆರ್‌ಎಸ್‍ಎಸ್ ಪಾದದ ಧೂಳಿಗೂ ಸಿದ್ದರಾಮಯ್ಯ ಸಮವಿಲ್ಲ. ದೇಶದ ಜನರ ಕ್ಷಮೆ ಕೇಳಬೇಕು. ರಾಷ್ಟ್ರದ್ರೋಹಿಗಳಿಗೆ ಇದುವರೆಗೂ ರಕ್ಷಣೆ ಕೊಡುತ್ತಾ ಬಂದಿರುವುದು ನೀವು ಎಂದು ಆಕ್ರೋಶ ಹೊರಹಾಕಿದ್ದಾರೆ.

ಒಂದೆರಡು ದಿನ ಆರ್‌ಎಸ್‍ಎಸ್ ಶಾಖೆಗೆ ಬನ್ನಿ. ನಾನೇ ನಿಮ್ಮನ್ನು ಶಾಖೆಗೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿನ ಚಟುವಟಿಕೆ ತಿಳಿದುಕೊಳ್ಳಿ. ಆರ್‌ಎಸ್‍ಎಸ್ ಬಗ್ಗೆ ಮಾತನಾಡಿರುವ ನಿಮ್ಮ ನಾಲಿಗೆಯನ್ನು ಮೊದಲು ತೊಳೆದುಕೊಳ್ಳಿ. ನೀವು ಡಿಕೆಶಿ ಸೇರಿಕೊಂಡು ಜಾತೀಯತೆ ತೇಪೆ ಹಚ್ಚಿ ಬಿಟ್ಟಿದ್ದೀರಾ. ನಿಮ್ಮ ರಾಜಕೀಯ ತೆವಲುಗಳಿಗೆ ಜಾತಿಯನ್ನು ತಂದಿಟ್ಟಿದ್ದೀರಿ. ಕುಡುಕರು ಮಾತನಾಡಿದ ರೀತಿ ಮಾತನಾಡುವುದು ಸರಿಯಲ್ಲ. ಶಾಖೆಗೆ ಬಂದು ಅಲ್ಲಿ ಇಂತಹ ತಪ್ಪಿದೆ. ಅಂತಹ ತಪ್ಪಿದೆ ಅಂದರೆ ನಾನು ಆಗ ಕೇಳುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ: ಈಶ್ವರಪ್ಪ

ಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಿ ಎಂಬ ಸಿದ್ದರಾಮಯ್ಯ ಅವರು ಹೇಳಿಕೆ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದು 24 ಗಂಟೆಯೊಳಗೆ ಬಂಧನ ಆಗಿದೆ. ಇದಕ್ಕಾಗಿ ಸಿಎಂ ಗೃಹ ಸಚಿವರನ್ನು ಅಭಿನಂದಿಸುತ್ತೇನೆ. ನಿಮ್ಮ ಅವಧಿಯಲ್ಲಿ 32 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಯಿತಲ್ಲ. ನೀವು ಎಷ್ಟು ಸರಿ ರಾಜೀನಾಮೆ ಕೊಟ್ರಿ? ಕಟೀಲ್ ಅವರನ್ನು ಈ ಹತ್ಯೆಯಲ್ಲಿ ವಿಚಾರಣೆ ಮಾಡಿ ಎಂದಿದ್ದೀರಾ, ಕಟೀಲ್ ಅವರನ್ನು ಏಕೆ ವಿಚಾರಣೆ ಮಾಡಬೇಕು? ಕಟೀಲ್ ಅಧ್ಯಕ್ಷರಾದ ಮೇಲೆ ನಿಮ್ಮ ಪಕ್ಷ ಅಧಿಕಾರ ಕಳೆದುಕೊಂಡಿತು ಅಂತಾ ಉರಿನಾ? ಕಟೀಲ್, ಸಿಎಂ, ಗೃಹ ಸಚಿವರ ವಿರುದ್ಧ ಮಾತನಾಡಿದರೆ ಸುಮ್ಮನಿರಲ್ಲ. ನಿಮ್ಮ ಪಕ್ಷದಲ್ಲಿ ಗುಂಪುಗಾರಿಕೆ ಮಾಡಿಕೊಳ್ಳಿ ನಮ್ಮ ಅಭ್ಯಂತರ ಇಲ್ಲ ಎಂದಿದ್ದಾರೆ.

ರಮೇಶ್ ಕುಮಾರ್ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತರ ಮೇಲೆ ಏಕೆ ಹಲ್ಲೆ ಮಾಡುತ್ತೀರಾ? ಇದು ಕಾಂಗ್ರೆಸ್ ಸಂಸ್ಕೃತಿ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ರಮೇಶ್ ಕುಮಾರ್ ಗೂಂಡಾ ಅಂತಾ ಎಲ್ಲರಿಗೂ ಗೊತ್ತಿದೆ. ರಮೇಶ್ ಕುಮಾರ್ ಅವರನ್ನು ಮೊದಲು ಬಂಧಿಸಬೇಕು ಕಿಡಿಕಾರಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ