ಸೋಮವಾರ, ಜುಲೈ 1, 2024
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!

Twitter
Facebook
LinkedIn
WhatsApp
ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಸಿಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಹೇಳಿದರು.

ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು.

ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekarnath Swamiji) ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು (Siddaramaiah) ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದರು. ‘

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ