ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯ ಬೆನ್ನಲ್ಲೇ ಕಾಂಗ್ರೆಸ್‌ ಟಿಕೆಟ್‌ಗಾಗಿ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅರ್ಜಿ ಸಲ್ಲಿಸಿದ ಮುನಿಯಪ್ಪ!

Twitter
Facebook
LinkedIn
WhatsApp
ಸಿದ್ದರಾಮಯ್ಯ ಬೆನ್ನಲ್ಲೇ ಕಾಂಗ್ರೆಸ್‌ ಟಿಕೆಟ್‌ಗಾಗಿ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅರ್ಜಿ ಸಲ್ಲಿಸಿದ ಮುನಿಯಪ್ಪ!

ಬೆಂಗಳೂರು: K.H.ಮುನಿಯಪ್ಪ ಪರವಾಗಿ ಆಪ್ತ ಸಹಾಯಕರು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಅರ್ಜಿಯಲ್ಲಿ ಕ್ಷೇತ್ರದ ಹೆಸರು ಉಲ್ಲೇಖಿಸಿಲ್ಲ. ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಸಹ ಕ್ಷೇತ್ರದ ಹೆಸರನ್ನು ಅರ್ಜಿಯಲ್ಲಿ ಬರೆದಿಲ್ಲ. ಇದೀಗ ಮುನಿಯಪ್ಪ ಸಹ ಅದೇ ಮಾದರಿ ಅನುಸರಿಸಿದ್ದು,  ಇಬ್ಬರು ನಾಯಕರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​  ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಇಂದು(ನವೆಂಬರ್ 21) ಕೊನೆ ದಿನವಾಗಿದ್ದು, ಘಟಾನುಘಟಿ ನಾಯಕರುಗಳು ಟಿಕೆಟ್​ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಕೆ.ಎಚ್​. ಮುನಿಯಪ್ಪ ಕೂಡ ಟಿಕೆಟ್​ಗಾಗಿ ಅರ್ಜಿ ಹಾಕಿದ್ದಾರೆ.

ಕೋಲಾರ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅಲ್ಲಿನ ಅನಭಿಷಿಕ್ತ ದೊರೆ. ,ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದಲ್ಲಿ ಹಿನ್ನೆಲೆಗೆ ಸರಿದಂತಿರುವ ಮುನಿಯಪ್ಪ, ಇತ್ತೀಚೆಗೆ ಕಾಂಗ್ರೆಸ್​ ತೊರೆಯುವ ತೀರ್ಮಾನ ಮಾಡಿದ್ದರು. ಆದ್ರೆ, ಹೈಕಮಾಂಡ್​ ಮನವೊಲಿಸಿ ಮುನಿಯಪ್ಪ ಅವರನ್ನು ಪಕ್ಷದಲ್ಲಿ ಉಳಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಮುನಿಯಪ್ಪ ಅವರು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದು, ಯಾವ ಕ್ಷೇತ್ರಕ್ಕೆ ಎನ್ನುವುದು ಕುತೂಹಲ ಮೂಡಿಸಿದೆ. ಮುನಿಯಪ್ಪ ಅವರು ಕೋಲಾರ ಬಿಟ್ಟು ದೇವನಹಳ್ಳಿ ಕ್ಷೇತ್ರಕ್ಕೆ ಹೋಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಮತ್ತೊಂದೆಡೆ ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗುತ್ತಿದೆ.

ಇದರ ಮಧ್ಯೆ ಈ ಇಬ್ಬರು ನಾಯಕರು ಟಿಕೆಟ್​ಗಾಗಿ ಸಲ್ಲಿಸಿದ ಅರ್ಜಿಯಲ್ಲಿ ಕ್ಷೇತ್ರದ ಹೆಸರು ಉಲ್ಲೇಖಿಸಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಕೋಲಾರ ಬಿಟ್ಟು ಬೇರೆ ಕಡೆ ಹೊದರೆ ಮುನಿಯಪ್ಪ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಆದರೆ, ಸಿದ್ದರಾಮಯ್ಯನವರು ಏನಾದರೂ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾದರೆ ಮುನಿಯಪ್ಪ ಯಾವ ಕ್ಷೇತ್ರಕ್ಕೆ ಹೋಗುತ್ತಾರೆ ಎನ್ನುವುದೇ ಪ್ರಶ್ನೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ