ಸೋಮವಾರ, ಜನವರಿ 20, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಖರ್ಗೆ, ಎಂಬಿ ಪಾಟೀಲ್, ಯುಟಿ ಖಾದರ್ ಹೆಸರು ಹೈಕಮಾಂಡ್ ಪರಿಶೀಲನೆಯಲ್ಲಿ?

Twitter
Facebook
LinkedIn
WhatsApp
ಸಿದ್ದರಾಮಯ್ಯ, ಖರ್ಗೆ, ಎಂಬಿ ಪಾಟೀಲ್, ಯುಟಿ ಖಾದರ್

ಬೆಂಗಳೂರು: ಮೂಡಾ ಹಗರಣದ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಹುದೊಡ್ಡ ಸ್ವರೂಪವನ್ನು ಪಡೆಯುತ್ತಿದ್ದು, ಈ ಸಂದರ್ಭದಲ್ಲಿ ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಹೈಕಮಾಂಡ್ ಬಳಿ ಮೂವರ ಹೆಸರು ಪರಿಶೀಲನೆಯಲ್ಲಿ ಇದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಹೈಕಮಾಂಡ್ ಮೂಲಗಳ ಪ್ರಕಾರ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ಸಚಿವ ಎಮ್ ಬಿ ಪಾಟೀಲ್ ಹಾಗೂ ಸ್ಪೀಕರ್ ಯುಟಿ ಖಾದರ್ ಹೆಸರು ಹೈಕಮಾಂಡ್ ಪರಿಶೀಲನೆಯಲ್ಲಿ ಇದೆ ಎಂದು ತಿಳಿದುಬಂದಿದೆ.

ಹೈಕಮಾಂಡ್ ಈ ಬಗ್ಗೆ ಗಂಭೀರ ಚಿಂತನೆಯಲ್ಲಿ ತೊಡಗಿಕೊಂಡಿದ್ದು, ಒಂದು ಮೂಲಗಳ ಪ್ರಕಾರ ಹೈಕಮಾಂಡ್ ಸಿದ್ದರಾಮಯ್ಯರವರನ್ನು ರಾಜೀನಾಮೆ ಕೊಡಿಸುವ ವಿಷಯದಲ್ಲಿ ಯಾವುದೇ ನಿರ್ಧಾರ ತಳೆದಿಲ್ಲ ಎಂದು ತಿಳಿದುಬಂದಿದೆ.

ಬಿಜೆಪಿ ಮೂಡಾ ಹಗರಣದ ವಿರುದ್ಧ ಬೃಹತ್ತಾದ ಪಾದೆ ಯಾತ್ರೆಯನ್ನು ಬೆಂಗಳೂರಿನಿಂದ ಮೈಸೂರುವರೆಗೆ ಕೈಗೊಂಡಿದ್ದು, ಪಾದೆಯಾತ್ರೆ ಮುಂದುವರಿಯುತ್ತಿದೆ.

ಈ ನಡುವೆ ರಾಜ್ಯಪಾಲರು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕಾನೂನಾತ್ಮಕ, ರಾಜಕೀಯ ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,  ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಮತ್ತು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಾರದು ಎಂದು ಸಂಪುಟದ ಸಚಿವರು ನೀಡಿರುವ ಸಲಹೆಯನ್ನು ಒಂದು ವೇಳೆ ರಾಜ್ಯಪಾಲರು ತಿರಸ್ಕರಿಸಿದರೆ. ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು.

ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು, ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ಇಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು.

ವಕೀಲ- ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಲ್ಲಿಸಿರುವ ಅರ್ಜಿ ಆಧರಿಸಿ, ರಾಜ್ಯಪಾಲರು ಜುಲೈ 26 ರಂದು ಶೋಕಾಸ್ ನೋಟಿಸ್ ನೀಡಿದ್ದು, ತಮ್ಮ ವಿರುದ್ಧದ ಆರೋಪಗಳಿಗೆ ಏಳು ದಿನಗಳೊಳಗೆ ಉತ್ತರ ಸಲ್ಲಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದ್ದಾರೆ.

ಈ ಮಧ್ಯೆ ಇದೇ ವಿಚಾರ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಎಂಬ ಸಂಟುಪ ಸಚಿವರ ಸಲಹೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ರಾಜ್ಯಪಾಲರು ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿದರೆ ಕಾಂಗ್ರೆಸ್ ಸರ್ಕಾರ ಕಾನೂನಾತ್ಮಕವಾಗಿ ಹೋರಾಟ ನಡೆಸಲಿದೆ ಎಂದರು.

ರಾಜ್ಯಪಾಲರು ಕೆಲವು ಅಧಿಕಾರಗಳನ್ನು ಹೊಂದಿರಬಹುದು, ಆದರೆ ಅವರು ಕ್ಯಾಬಿನೆಟ್ ಸಲಹೆಯನ್ನು ಅಷ್ಟು ಸುಲಭವಾಗಿ ತಿರಸ್ಕರಿಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದಾಗ್ಯೂ, ಅವರು ಕಾನೂನು ಕ್ರಮಕ್ಕೆ ಅನುಮತಿ ನೀಡಿದರೆ, ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯರನ್ನ ಮುಟ್ಟಲು ನಿಮ್ಮ ಹಣೆಯಲ್ಲೂ ಬರೆದಿಲ್ಲ – ಡಿಕೆಶಿ 

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ (BJP JDS Padayatra) ಕೌಂಟರ್‌ ಕೊಡಲು ಇಂದಿನಿಂದ (ಆ.5) ಎರಡು ದಿನಗಳ ಕಾಲ ಕಾಂಗ್ರೆಸ್‌ ಜನಾಂದೋಲನ ಆರಂಭಿಸಿದೆ.

ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಜನಾಂದೋಲನ ಸಮಾವೇಶ ಮೊದಲ ದಿನ ಕಾಂಗ್ರೆಸ್‌ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್‌ ಬೀಸಿದ್ದಾರೆ. ಅಲ್ಲದೇ ಬಿಜೆಪಿ – ಜೆಡಿಎಸ್‌ ಮೈತ್ರಿಕೂಟದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಭಾಷಣ ಮಾಡುತ್ತಾ, ಸಿದ್ದರಾಮಯ್ಯ ಏನು ಮಾಡಬಾರದ ತಪ್ಪು ಮಾಡಿದ್ದಾರೆ? ಸಿದ್ದರಾಮಯ್ಯ ಕಳ್ಳತನ ಮಾಡಿದ್ದಾರ? ಸರ್ಕಾರಿ ಜಮೀನು ಒಡೆದಿದ್ದಾರ? ಸರ್ಕಾರ ಪಡೆದು ಬೇರೆ ಜಾಗ ಕೊಟ್ಟಿದೆ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ (ಬಿಜೆಪಿ) ಸರ್ಕಾರದಲ್ಲಾದ ಹಗರಣಗಳ ಬಗ್ಗೆ ಮೊದಲು ಉತ್ತರ ಕೊಡಿ. ಆನಂತರ ಪಾದಯಾತ್ರೆ ಮಾಡಿ. ಸಿದ್ದರಾಮಯ್ಯರನ್ನ ಮುಟ್ಟಲು ನಿಮ್ಮ ಹಣೆಯಲ್ಲೂ ಬರೆದಿಲ್ಲ. ಹಿಂದುಳಿದ ವರ್ಗದ ನಾಯಕ 2ನೇ ಬಾರಿಗೆ ಸಿಎಂ ಆಗಿದ್ದು ನಿಮಗೆ ಸಹಿಸಲು ಆಗ್ತಿಲ್ಲ. ಸರ್ಕಾರ ಮಾಡುವ ಅವಕಾಶ ನಮಗೆ ಸಿಗಲಿಲ್ಲ ಎಂದು ಸಾಯುತ್ತಿದ್ದಾರೆ ಎಂದು ಬಿಜೆಪಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

 ನಮ್ಮದು 10 ತಿಂಗಳ ಸರ್ಕಾರ ಅಲ್ಲ. 10 ವರ್ಷದ ಸರ್ಕಾರ ನಮ್ಮದು ಎಂದು ಹೆಚ್‌ಡಿಕೆಗೆ ಟಾಂಗ್‌ ನೀಡಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist