ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೊದಲ ಆರೋಪಿಯ ಬಂಧನವನ್ನ ಮಂಗಳವಾರ ಖಚಿತಪಡಿಸಿದ್ದಾರೆ. ಆರೋಪಿ ಮನ್‌ಪ್ರೀತ್‌ನನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ.
ಪಂಜಾಬ್ ಪೊಲೀಸರು ತನ್ನನ್ನು ನಕಲಿ ಎನ್‌ಕೌಂಟರ್ ನಲ್ಲಿ ಹತ್ಯೆ ಮಾಡುವ ಸಾಧ್ಯತೆ ಇದೆ ಎಂದಿರುವ ಬಿಷ್ಣೋಯ್, ತನ್ನನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸದಂತೆ ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಇಂದು ಅರ್ಜಿಯ ವಿಚಾರಣೆ ನಡೆಸಲಿದೆ.
ಮೂಸೆವಾಲಾ ಹತ್ಯೆಯ ಹೊಣೆ ಹೊತ್ತಿರುವ ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್, ಬಿಷ್ಣೋಯ್ ಅವರ ಆಪ್ತ ಸಹಾಯಕ. ಲಾರೆನ್ಸ್ ಬಿಷ್ಣೋಯ್ ದೆಹಲಿ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ನಾಯಕ. ಸಿಧು ಮೂಸ್ ವಾಲಾ ಹತ್ಯೆಯ ಹಿಂದೆ ಗ್ಯಾಂಗ್ ಪೈಪೋಟಿ ಇದೆ ಎಂದು ಪಂಜಾಬ್ ಪೊಲೀಸರು ಶಂಕಿಸಿದ್ದಾರೆ. ಗೋಲ್ಡಿ ಬ್ರಾರ್, ತಿಹಾರ್ ಜೈಲಿನಲ್ಲಿ ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ದೆಹಲಿ ಪೊಲೀಸರ ವಿಶೇಷ ಸೆಲ್ ನಿನ್ನೆ ತಿಹಾರ್ ಜೈಲಿನಲ್ಲಿ ಬಿಷ್ಣೋಯ್ ಯನ್ನು ವಿಚಾರಣೆ ನಡೆಸಿದ್ದು, ಅಲ್ಲಿ ಅವರನ್ನು ಹೈ-ಸೆಕ್ಯುರಿಟಿ ವಾರ್ಡ್‌ನಲ್ಲಿ ಇರಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡ ಇದೀಗ ಪಂಜಾಬ್‌ಗೆ ತೆರಳಿದೆ. ಬಿಷ್ಣೋಯ್, ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಥವಾ MCOCA ಅಡಿಯಲ್ಲಿ ದೆಹಲಿಯ ತಿಹಾರ್ ಜೈಲು ಸೇರಿದ್ದಾನೆ. ಇಂತಹ ಪ್ರಕರಣದಲ್ಲಿ ಜಾಮೀನು ಸುಲಭವಾಗಿ ಸಿಗುವುದಿಲ್ಲ
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist