ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿನಿಮಾ ರೀತಿಯಲ್ಲೇ ಮನೆಗೆ ನುಗ್ಗಿದ 50 ಗೂಂಡಾಗಳು- ವೈದ್ಯೆ ಕಿಡ್ನ್ಯಾಪ್

Twitter
Facebook
LinkedIn
WhatsApp
ಸಿನಿಮಾ ರೀತಿಯಲ್ಲೇ ಮನೆಗೆ ನುಗ್ಗಿದ 50 ಗೂಂಡಾಗಳು- ವೈದ್ಯೆ ಕಿಡ್ನ್ಯಾಪ್

ಹೈದರಾಬಾದ್: ಸಿನಿಮೀಯ ರೀತಿಯಲ್ಲೇ ಕನಿಷ್ಠ 50 ಗೂಂಡಾಗಳು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ವೈದ್ಯೆಯನ್ನು (woman doctor) ಕಿಡ್ನ್ಯಾಪ್ (kidnap) ಮಾಡಿದ ಘಟನೆ ತೆಲಂಗಾಣದ (Telangana) ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಕಾಣೆಯಾದ ವೈದ್ಯೆಯನ್ನು ವೈಶಾಲಿ (24) ಎಂದು ಗುರುತಿಸಲಾಗಿದೆ. ವೈದ್ಯೆ ವೈಶಾಲಿ ಮನೆಗೆ ನುಗ್ಗಿದ್ದ ಗೂಂಡಾಗಳು ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅದಾದ ಬಳಿಕ ಮನೆಯಲ್ಲಿದ್ದ ಆಕೆಯ ತಂದೆ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ನಂತರ ಬಲವಂತವಾಗಿ ವೈಶಾಲಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವೈಶಾಲಿಯ ಒಪ್ಪಿಗೆಯಿಲ್ಲದೇ ಅವಳನ್ನು ಎಳೆದುಕೊಂಡು ಕಾರಿನಲ್ಲಿ ಕೂರಿಸಿದರು ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದರು.

ಘಟನೆಗೆ ಸಂಬಂಧಿಸಿ ರಾಚಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ರಾಚಕೊಂಡ ಹೆಚ್ಚುವರಿ ಸಿಪಿ ಸುಧೀರ್ ಬಾಬು ಮಾತನಾಡಿ, ಘಟನೆಯ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲು ತಂಡಗಳನ್ನು ವಿಂಗಡಿಸಲಾಗಿದೆ. ವೈಶಾಲಿಯನ್ನು ಹುಡುಕಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈಗಾಗಲೇ ಪೋಷಕರೊಂದಿಗೆ ಮಾತನಾಡಿ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ