ಸಿನೆಮಾಗೆ ಗುಡ್ ಬೈ ಹೇಳಿ ರಾಜಕೀಯವನ್ನೇ ಮುನ್ನಡೆಸುತ್ತಾರಾ ನಿಖಿಲ್ ಕುಮಾರಸ್ವಾಮಿ..?
ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿ ಗೆಲುವಿನ ಬಳಿಕ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವ ಜವಾಬ್ದಾರಿ ನಿಖಿಲ್ ಕುಮಾರಸ್ವಾಮಿ ಅವರ ಮೇಲೆ ಬಿದ್ದಿದೆ. ಈ ಸಂಬಂಧ ಇತ್ತೀಚೆಗೆ ಪ್ರತಿಕಾಗೋಷ್ಠಿಯನ್ನು ನಡೆಸಿ, ತಮ್ಮ ಮುಂದಿನ ನಡೆಯ ಬಗ್ಗೆ ಮಾತಾಡಿದ್ದಾರೆ ನಿಖಿಲ್ ಕುಮಾರಸ್ವಾಮಿ. “ಸಿನಿಮಾವನ್ನು ಸಂಪೂರ್ಣ ಬಂದ್ ಮಾಡಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ನಾನು ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ” ಎಂದರು.
ಜೆಡಿಎಸ್ ಪಕ್ಷದ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಈ ಫಲಿತಾಂಶದ ಬಳಿಕ ಖಡಕ್ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ʻʻನಾನು ಸಿನಿಮಾ ಸಂಪೂರ್ಣವಾಗಿ ಬಂದ್ ಮಾಡಿದ್ದೇನೆ. ರಾಜಕೀಯದಲ್ಲಿ ಇವತ್ತು ನನ್ನದೇ ಆದ ಜವಾಬ್ದಾರಿಗಳಿವೆ. ನಾನು ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾಧ್ಯಕ್ಷನಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿ ಯುವ ಕಾರ್ಯಕರ್ತರಿಗೆ ಹೊಸ ಚೇತನವನ್ನು ತುಂಬಿಸಬೇಕು. ಹಾಗೇ ಜೆಡಿಎಸ್ ಕಾರ್ಯಕರ್ತನಾಗಿ ಕೆಲಸವನ್ನು ಮುಂದುವರಿಸುತ್ತೇನೆʼʼ ಎಂದು ಅವರು ಘೋಷಿಸಿದ್ದಾರೆ. ಈ ಮೂಲಕ ಅವರು ಸಿನಿಮಾ ರಂಗ ತೊರಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
‘ಜಾಗ್ವಾರ್’ ಸಿನಿಮಾ ಮೂಲಕ ನಿಖಿಲ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಿಖಿಲ್ ಕೆಲವು ದಿನಗಳ ಹಿಂದೆ ಹೊಸ ಸಿನಿಮಾಗೆ ಚಿತ್ರೀಕರಣ ತೊಡಗಿಸಿಕೊಂಡಿದ್ದರು. ಕಮಲ್ ಹಾಸನ್, ರಜನಿಕಾಂತ್, ಅಜಿತ್, ವಿಜಯ್ ಸೇರಿದಂತೆ ಅನೇಕ ಸೂಪರ್ ಸ್ಟಾರ್‌ಗಳ ಚಿತ್ರಗಳಿಗೆ ಬಂಡವಾಳ ಹಾಕಿರುವ ಲೈಕಾ ಸಂಸ್ಥೆ ನಿಖಿಲ್ ಕುಮಾರ್ (Nikhil Kumaraswamy) ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಲೈಕಾ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಬೇಕಿದೆ. ಚಿತ್ರವನ್ನು ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದು ಚಿತ್ರೀಕರಣದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಶುರುವಾಗಿತ್ತು. ಚಿತ್ರಕ್ಕೆ ಯುಕ್ತಿ ತರೇಜಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಲಕ ಲೈಕಾ ಸಂಸ್ಥೆ ಮೊದಲ ಬಾರಿಗೆ ಕನ್ನಡ ಇಂಡಸ್ಟ್ರಿಯಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿದೆ.
ತಮಿಳಿನಲ್ಲಿ ‘ಕತ್ತಿ’, ‘2.0’, ‘ದರ್ಬಾರ್’, ‘ಪೊನ್ನಿyನ್ ಸೆಲ್ವನ್’ ಸೇರಿದಂತೆ ಹಲವು ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಿಸಿದೆ. ಕೆಲವೇ ದಿನಗಳ ಹಿಂದೆಯಷ್ಟೆ ಖಾಸಗಿ ಹೋಟೆಲ್‌ನಲ್ಲಿ ಪ್ರೊಡಕ್ಷನ್ ನಂ. 28 ಸಿನಿಮಾ ಮುಹೂರ್ತ ನೆರವೇರಿತ್ತು. ಮಾಜಿ ಪ್ರಧಾನಿ ಎಚ್. ಡಿ ದೇವಗೌಡರು, ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಈ ಸಮಾರಂಭದಲ್ಲಿ ಭಾಗಿಯಾಗಿ ತಂಡಕ್ಕೆ ಶುಭ ಕೋರಿದ್ದರು.