ಬುಧವಾರ, ನವೆಂಬರ್ 20, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್‌‌‌ ಸೇರ್ತಾರಾ ಸಿಪಿ ಯೋಗೀಶ್ವರ್? ದಳಪತಿಗಳ ಪಟ್ಟು; ಬಿಜೆಪಿ ಕಂಗಾಲು!

Twitter
Facebook
LinkedIn
WhatsApp
cp yogeshwar ಸಿಪಿ ಯೋಗೀಶ್ವರ್

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಜಟಾಪಟಿಯ ಬೆನ್ನಲ್ಲೇ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ರಾಜೀನಾಮೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಎನ್ ಡಿ ಎ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಕಣಕ್ಕಿಳಿಯಲು ಯೋಗೇಶ್ವರ್ ನಿರ್ಧರಿಸಿದ್ದರು, ಆದರೆ ಕೇಸರಿ ಪಕ್ಷದ ಹೈಕಮಾಂಡ್ ಅವರಿಗೆ ಈ ಸ್ಥಾನ ಜೆಡಿಎಸ್‌ಗೆ ಸೇರಿದ್ದು, ಕೇಂದ್ರ ಸಚಿವ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮುನ್ನ ಚನ್ನಪಟ್ಟಣದಿಂದ ಗೆದ್ದಿದ್ದ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಬಯಸಿದ್ದರು ಮತ್ತು ಸಿಪಿ ಯೋಗೀಶ್ವರ್ ಅವರ ಮನವೊಲಿಸಲು ಪ್ರಯತ್ನಿಸಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. 

ಯೋಗೇಶ್ವರ್​ ಅವರಿಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವಂತೆ ಕೇಂದ್ರ ಸಚಿವ ಹೆಚ್​ .ಡಿ ಕುಮಾರಸ್ವಾಮಿ ಆಫರ್ ನೀಡಿದ್ದರು. ಆದರೆ, ಅದನ್ನು ಸಿಪಿ ಯೋಗೀಶ್ವರ್ ತಿರಸ್ಕರಿಸಿದ್ದಾರೆ. ಹೀಗಾಗಿ ಯೋಗೇಶ್ವರ್ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಇದಕ್ಕನುಗುಣವಾಗಿಯೇ ಕಾಂಗ್ರೆಸ್ ಕೂಡ ರಣತಂತ್ರ ರೂಪಿಸುತ್ತಿದೆ.

ಯೋಗೇಶ್ವರ್, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಜತೆ ಡೀಲ್‌ ಮಾಡಿಕೊಂಡಿರುವ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ, ಯೋಗೇಶ್ವರ ಅವರು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಸಮರ್ಥಿಸಿಕೊಂಡರು, ಆದರೆ ಕಾಂಗ್ರೆಸ್ ಯೋಗೇಶ್ವರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮನಸ್ಸು ಮಾಡಿರುವುದರಿಂದ ಅದು ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ.ಯೋಗೇಶ್ವರ್ ಕೂಡ ಕಾಂಗ್ರೆಸ್ ಆಫರ್ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚನ್ನಪಟ್ಟಣದ ಕಗ್ಗಂಟು ಹೆಚ್ಚಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಸಿಪಿ ಯೋಗೇಶ್ವರ್ ಕನಸಿಗೆ ಕೊಳ್ಳಿ ಇಡುವ ಸಾಧ್ಯತೆ ದಟ್ಟವಾಗಿದೆ. ಉಪ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ 2 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಅಭ್ಯರ್ಥಿ ಫೈನಲ್ ಆಗಿಲ್ಲ. ಸಿಪಿ ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿದ್ದರೆ, ಇತ್ತ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಬಲ ಕ್ಷೇತ್ರ ಇದಾಗಿದೆ. ಆದರೆ ಮೈತ್ರಿ ಧರ್ಮಾ ಪಾಲನೆಯಿಂದಾಗಿ ಈ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ನಿಚ್ಚಳವಾಗಿದೆ. ಇದರ ಬೆನ್ನಲ್ಲೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯನ್ನು ಕಂಗಾಲು ಮಾಡಿದೆ. 

ಎಚ್‌ಡಿಕೆ ಪರವಾಗಿ ನಿಂತಿದ್ದ ಬಿಎಸ್‌ವೈ

ಇನ್ನು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಎಚ್‌ಡಿ ಕುಮಾರಸ್ವಾಮಿ ಅವರ ಪರವಾಗಿ ಮಾತನಾಡಿದ್ದರು. ಚನ್ನಪಟ್ಟಣದಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುವುದು ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದ್ದರು. ಈ ಮೂಲಕ ಚನ್ನಪಟ್ಟಣದಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬುವುದು ಸಿಪಿವೈಗೂ ಖಚಿತವಾಗಿತ್ತು.

ಇನ್ನು ಸಿಪಿ ಯೋಗೇಶ್ವರ್‌ ರಾಜೀನಾಮೆಯಿಂದ ದಳಪತಿಗಳ ನಿವಾಸದಲ್ಲೂ ರಾಜಕೀಯ ಬೆಳವಣಿಗೆ ಗರಿಗೆದರಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ. 

ನಿಖಿಲ್ ಕುಮಾರಸ್ವಾಮಿ ಅವರನ್ನೇ ಚನ್ನಪಟ್ಟಣದಲ್ಲಿ ಕಣಕ್ಕೆ ಇಳಿಸಲು ಜೆಡಿಎಸ್ ಪ್ಲ್ಯಾನ್ ಮಾಡುತ್ತಿದೆ. ಇದೀಗ ಸಿಪಿವೈ ರಾಜೀನಾಮೆಯಿಂದಾಗಿ ಈ ಸಾಧ್ಯತೆಗಳು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸದಲ್ಲಿ ಮಾತುಕತೆ ಮಹತ್ವ ಪಡೆದುಕೊಂಡಿದೆ.

ಸಿಪಿ ಯೋಗೇಶ್ವರ್ ಅವರು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ? ಅಥವಾ ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಾರಾ ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ನಿಂದ ಅವರನ್ನು ಅಖಾಡಕ್ಕೆ ಇಳಿಸಲು ಪ್ರಯತ್ನಗಳು ನಡೆಯುತ್ತಿದೆ. ಆದರೆ ಅದಕ್ಕೆ ಪೂರ್ಣ ಪ್ರಮಾಣದಲ್ಲಿ ಒಪ್ಪಿಗೆ ದೊರೆತಿಲ್ಲ. ಹೀಗಾಗಿ ಅವರ ಮುಂದಿನ ನಡೆಯೂ ಕುತೂಹಲಕ್ಕೆ ಕಾರಣವಾಗಿದೆ.

NAYAN BAKERY

ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್:

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರುವುದು. ಒಂದು ವೇಳೆ, ಸಿಪಿವೈ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಪ್ರಬಲ ಅಭ್ಯರ್ಥಿಯನ್ನು ಕಾಂಗ್ರೆಸ್​ನಿಂದ ಕಣಕ್ಕೆ ಇಳಿಸುವುದು. ಒಂದು ವೇಳೆ ತ್ರಿಕೋನ ಸ್ಪರ್ಧೆ ಏರ್ಪಟ್ಟಲ್ಲಿ ಡಿಕೆ ಸುರೇಶ್ ​ಅವರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ಡಮ್ಮಿ ಅಭ್ಯರ್ಥಿಯನ್ನು ಹಾಕಿ ಕುಮಾರಸ್ವಾಮಿಗೆ ಸೋಲುಣಿಸುವ ತಂತ್ರವನ್ನೂ ಅನುಸರಿಸಬಹುದು. ಎಲ್ಲಾ ಅಂದುಕೊಂಡಂತೆ ಆಗಿ ಎನ್​ಡಿಎ ಅಭ್ಯರ್ಥಿಯೇ ಚುನಾವಣೆಗೆ ಸ್ಪರ್ಧಿಸಿದರೆ, ಕಾಂಗ್ರೆಸ್​ನಿಂದ ರಘುನಂದನ್ ರಾಮಣ್ಣಗೆ ಅವಕಾಶ ಸಿಗುವ ಸಾಧ್ಯತೆಯೂ ಇದೆ.

ಹೀಗೆ ಒಂದೆಡೆ ಒಳಗೊಳಗೆ ರಣತಂದ್ರ ಸಿದ್ಧವಾಗುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್, ಕಾಂಗ್ರೆಸ್​ನವರು ನನ್ನ ಸಂಪರ್ಕಿಸಿಲ್ಲ. ಅಂತಹ ಆಲೋಚನೆಯೂ ನನಗಿಲ್ಲ ಎಂದಿದ್ದಾರೆ. ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪಕ್ಷದ ಅಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ ಈ ಬಗ್ಗೆ ಚರ್ಚೆ ಆಗಿಲ್ಲ. ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗೆ ಚನ್ನಪಟ್ಟಣ ಅಖಾಡ ಉಪ ಚುನಾವಣೆ ಅಖಾಡ ಅಂದುಕೊಂಡಷ್ಟು ಸಲೀಸಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ‌. ಆದರೆ, ಇಂದೇ ಚನ್ನಪಟ್ಟಣ ಕ್ಲೈಮ್ಯಾಕ್ಸ್​​ಗೆ ತೆರೆ ಬೀಳುವ ಸಾಧ್ಯತೆಯೂ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ