ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ..!

Twitter
Facebook
LinkedIn
WhatsApp
ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ..!

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಇದಕ್ಕೂ ಮೊದಲು ಸೋಮವಾರದಂದು ತಿಹಾರ್​ ಜೈಲಿನಲ್ಲೇ ಕೇಜ್ರಿವಾಲ್​ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದರು.

ಮಂಗಳವಾರವೂ ಮತ್ತೊಮ್ಮೆ ವಿಚಾರಣೆ ನಡೆಸಿದ್ದರು. ಬಳಿಕ ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ಕೇಜ್ರಿವಾಲ್​ ಅವರನ್ನು ಹಾಜರು ಪಡಿಸಲು ಅನುಮತಿಯನ್ನು ಸಿಬಿಐ ಪಡೆದಿತ್ತು. ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿ ಅಧಿಕೃತವಾಗಿ ಬಂಧಿಸಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಅವರ ನಿವಾಸದಿಂದ ಬಂಧಿಸಿತ್ತು. ಏಪ್ರಿಲ್ 1 ರಂದು ತಿಹಾರ್‌ಗೆ ಕಳುಹಿಸಲಾಗಿತ್ತು.

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ ಅರವಿಂದ್​ ಕೇಜ್ರಿವಾಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠವು ರೋಸ್​​​ ಅವೆನ್ಯೂ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಿ ಆದೇಶ ಮಾಡಿತ್ತು.

ಇಂದು ಸುಪ್ರೀಂನಲ್ಲಿ ವಿಚಾರಣೆ: ದೆಹಲಿ ಹೈಕೋರ್ಟ್​ನ​ ಜಾಮೀನು ತಡೆಯಾಜ್ಞೆ ಆದೇಶವನ್ನು ಪ್ರಶ್ನಿಸಿ ಕಳೆದ ಎರಡು ದಿನಗಳ ಹಿಂದೆ ಸಿಎಂ ಕೇಜ್ರಿವಾಲ್​ ಅವರು ಸುಪ್ರೀಂ ಕೋರ್ಟ್​ ಕದ ತಟ್ಟಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ವಿಎನ್ ಭಟ್ಟಿ ಮತ್ತು ಮನೋಜ್ ಮಿಶ್ರಾ ಅವರಿದ್ದ ದ್ವಿಸದಸ್ಯ ಪೀಠವು, ಹೈಕೋರ್ಟ್​ ವಿಚಾರಣೆ ನಡೆಸುತ್ತಿರುವ ಹಿನ್ನೆಲೆ ತೀರ್ಪು ಪ್ರಕಟವಾಗುವವರೆಗೆ ಕಾಯ್ದಿರಲು ಸೂಚಿಸಿ ಜೂ.26ಕ್ಕೆ (ಇಂದಿಗೆ) ವಿಚಾರಣೆ ಮುಂದೂಡಿತ್ತು.

ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿರುವ ಕೇಜ್ರಿವಾಲ್ ಅವರಿಗೆ ಕೆಳ ಹಂತದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ