ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

Twitter
Facebook
LinkedIn
WhatsApp
ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

ಕೋಲ್ಕತ್ತ: ಜಾರಿ ನಿರ್ದೇಶನಾಲಯ (ಇಡಿ)  ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ.

ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳ ಪದಾಧಿಕಾರಿಗಳನ್ನು ನಿರ್ದಿಷ್ಟವಾಗಿ ಆಯ್ಕೆ ಮಾಡಿ ಟಾರ್ಗೆಟ್ ಮಾಡಲಾಗುತ್ತಿದೆ ಹಾಗೂ ಭಯದ ವಾತಾವರಣ ಮೂಡಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಗಂಭೀರ ಆರೋಪ ಮಾಡಿದೆ.

ಶಾಲಾ ನೇಮಕಾತಿ ಹಗರಣ, ಗೋವು ಕಳ್ಳಸಾಗಣೆ, ಕಲ್ಲಿದ್ದಲು ಕಳ್ಳತನ ಪ್ರಕರಣಗಳೂ ಸೇರಿದಂತೆ ರಾಜ್ಯದಲ್ಲಿ ಉನ್ನತ ಮಟ್ಟದ ಪ್ರಕರಣಗಳನ್ನು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ಈ ನಿರ್ಣಯ ಕೈಗೊಂಡಿದೆ.

ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

ಟಿಎಂಸಿ ಶಾಸಕರಾದ ನಿರ್ಮಲ್ ಘೋಷ್ ಹಾಗೂ ತಪಸ್ ರಾಯ್ ನಿರ್ಣಯವನ್ನು ಮಂಡಿಸಿದರು. “ಕೇಂದ್ರೀಯ ಏಜೆನ್ಸಿಗಳು ಪಶ್ಚಿಮ ಬಂಗಾಳ ಆಡಳಿತಾ ರೂಢ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದು, ಭಯದ ವಾತಾವರಣ ಮೂಡಿಸುತ್ತಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದ್ದು, ಇದರಲ್ಲಿ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಹಾಗೂ ಸುಬ್ರತಾ ಮುಖರ್ಜಿ ಅವರನ್ನು  ನಾರದಾ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ 2021 ರ ವಿಧಾನಸಭಾ ಚುನಾವಣೆಯ ನಂತರ ಸಿಬಿಐ ಬಂಧಿಸಿರುವುದನ್ನು ಉಲ್ಲೇಖಿಸಲಾಗಿದೆ.

ಬಿಜೆಪಿ ನಾಯಕರ ಹೆಸರು ಚಿಟ್ ಫಂಡ್ ಹಗರಣದಲ್ಲಿದ್ದರೂ, ಏಜೆನ್ಸಿಗಳು ಕೇವಲ ಹಗರಣದ ಒಂದು ಭಾಗವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನಿರ್ಣಯ ಮಂಡಿಸಿದೆ. ಕೇಂದ್ರೀಯ ಏಜೆನ್ಸಿಗಳು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸುವ ಪಿತೂರಿ ಮತ್ತು ಭಯದ ರಾಜಕೀಯವನ್ನು ಹೆಚ್ಚಿಸುವುದಕ್ಕೆ ಸಹಕರಿಸುತ್ತಿವೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈ ಬಗ್ಗೆ ಮಾತನಾಡಿದ್ದು, ಇದೆಲ್ಲದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ ಎಂದು ತಾವು ನಂಬುವುದಿಲ್ಲ ಎಂದು ಹೇಳಿದ್ದು, ಬಿಜೆಪಿ ನಾಯಕರ ಒಂದು ಗುಂಪು ಅವರ ಹಿತಾಸಕ್ತಿಗಳನ್ನು ಪೂರೈಸಲು ಕೇಂದ್ರ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಸಿಬಿಐ ಈಗ ಅಮಿತ್ ಶಾ ನಿರ್ವಹಿಸುತ್ತಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಉತ್ತರದಾಯಿಯಾಗಿದೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ