ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ

Twitter
Facebook
LinkedIn
WhatsApp
ಸೀರೆ ನೆರಿಗೆಯಿಂದಾಗಿ ಬೈಕಿನ ಚಕ್ರದೊಳಗೆ ಕಾಲು ಸಿಲುಕಿ ಮಹಿಳೆ ನರಳಾಟ

ಚಿಕ್ಕಮಗಳೂರು: ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ (Saree) ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ ಕಾಲು ಕೂಡ ಬೈಕಿನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ತರೀಕೆರೆ ಪಟ್ಟಣ ಸಮೀಪದ ಇಟ್ಟಿಗೆ ಗ್ರಾಮದ ಯಶೋದಾ ಬಾಯಿ ಎಂಬ ಮಹಿಳೆ ಬೈಕಿನಲ್ಲಿ ತರೀಕೆರೆ ಪಟ್ಟಣಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕಿನ ಹಿಂದೆ ಕೂತಿದ್ದ ಮಹಿಳೆಯ ಸೀರೆ ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ, ಕಾಲು ಕೂಡ ಚಕ್ರದೊಳಗೆ ಸಿಲುಕಿಕೊಂಡಿದೆ. ಕೂಡಲೇ ಬೈಕ್ (Bike) ಸವಾರ ಹಾಗೂ ಮಹಿಳೆ ಕೆಳಕ್ಕೆ ಬಿದ್ದಿದ್ದಾರೆ.

ಮಹಿಳೆಯ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿಕೊಂಡಿದೆ. ಬೈಕ್ ಸವಾರ ಹಾಗೂ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಕಾಲನ್ನ ಹೊರಕ್ಕೆ ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನೋವಿನಿಂದ ನರಳಾಡಿದ್ದಾರೆ. ಬಳಿಕ ಬೈಕಿನ ಚೈನ್ ಕಟ್ ಮಾಡಿ, ಗೇರ್ ಬಾಕ್ಸ್ ಬಿಚ್ಚಿ ಮಹಿಳೆಯ ಕಾಲನ್ನು ಹೊರ ತೆಗೆದಿದ್ದಾರೆ.

ಕಾಲಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಈ ದೃಶ್ಯ ನೋಡುವರಿಗೆ ಮೈರೋಮ ಎದ್ದು ನಿಲ್ಲುವಂತೆ ಮಾಡುತ್ತಿದೆ. ಸೀರೆಯುಟ್ಟ ಮಹಿಳೆಯರು ಹಾಗೂ ಚೂಡಿದಾರ ಧರಿಸಿದ ಯುವತಿಯರು ಬೈಕಿನ ಹಿಂಭಾಗ ಕೂತು ಹೋಗುವಾಗ ತೀವ್ರವಾದ ಎಚ್ಚರಿಕೆಯಿಂದ ಇರಬೇಕಾಗಿದೆ. ಚೂಡಿದಾರ ಧರಿಸಿದ ಮಹಿಳೆಯರ ವೇಲ್ ಕೂಡ ಟೈರ್‍ಗೆ ಸಿಕ್ಕಿ ಬಿದ್ದುವರು ಇದ್ದಾರೆ. ಹಾಗಾಗಿ ಸೀರೆ ಹಾಗೂ ಚೂಡಿದಾರ ಧರಿಸಿ ಬೈಕಿನಲ್ಲಿ ಹೋಗುವ ಮಹಿಳೆಯರು, ಯುವತಿಯರು ಎಚ್ಚರಿಕೆಯಿಂದ ಇರಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ