ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುತ್ತಿಗೆಯಿಂದ ಹೊಡೆದು ತಂದೆಯ ಕೊಲೆ – ಶವವನ್ನು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪಾಪಿ ಮಗ

Twitter
Facebook
LinkedIn
WhatsApp
rksingh 3

ಲಕ್ನೋ: ಆಸ್ತಿ ವಿವಾದಕ್ಕಾಗಿ ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಸುತ್ತಿಗೆಯಿಂದ (Hammer) ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ (Uttar Pradesh) ಗೋರಖ್‍ಪುರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸೂರಜ್ ಕುಂಡ್ ಕಾಲೋನಯಲ್ಲಿ ಈ ಘಟನೆ ನಡೆದಿದೆ. ಮುರುಳಿಧರ್ ಗುಪ್ತ (62) ಮೃತ ವ್ಯಕ್ತಿ ಹಾಗೂ ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಅಲಿಯಾಸ್ ಪ್ರಿನ್ಸ್ (30) ಎಂದು ಗುರುತಿಸಲಾಗಿದೆ.

ಆಸ್ತಿ ಕುರಿತು ತಂದೆ ಹಾಗೂ ಮಗನ ನಡುವೆ ಜಗಳ ನಡೆದಿದೆ. ಈ ವೇಳೆ ಮುರುಳಿಧರ್ ಒಬ್ಬನೇ ಇದ್ದುದ್ದನ್ನು ನೋಡಿದ ಸಂತೋಷ್ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮ ಮುರುಳಿಧರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅದಾದ ಬಳಿಕ ಮುರುಳಿಧರ್‌ನ ದೇಹವನ್ನು ವಿಲೇವಾರಿ ಮಾಡಲು ದೇಹವನ್ನು ತುಂಡಾಗಿ ಕತ್ತರಿಸಿದ್ದಾನೆ. ನಂತರ ಸಂತೋಷ್ ಸಹೋದರನ ಕೊಠಡಿಯಿಂದ ಸೂಟ್‍ಕೇಸ್ (Suitcase) ಅನ್ನು ತಂದು ಶವದ ತುಂಡುಗಳನ್ನು ಅದರಲ್ಲಿ ಹಾಕಿದ್ದಾನೆ. ಸೂಟ್‍ಕೇಸ್‍ನ್ನು ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದಾನೆ.

ಘಟನೆಗೆ ಸಂಬಂಧಿಸಿ ಆರೋಪಿ ಸಂತೋಷ್‍ನ ಸಹೋದರ ಪ್ರಶಾಂತ್ ಗುಪ್ತಾ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಆರೋಪಿಯ ಸಹೋದರನ ಮಾಹಿತಿಯ ಮೇರೆಗೆ, ಪೊಲೀಸರು ದೇಹದ ಭಾಗಗಳನ್ನು ವಶಪಡಿಸಿಕೊಂಡರು ಮತ್ತು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ