ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಪ್ರೀಂಕೋರ್ಟ್‌ನಲ್ಲಿ ಜನಾರ್ದನ ರೆಡ್ಡಿಗೆ ಹಿನ್ನಡೆ ಬಳ್ಳಾರಿ ಪ್ರವೇಶಕ್ಕೆ ಅವಕಾಶ ಇಲ್ಲ

Twitter
Facebook
LinkedIn
WhatsApp
Madhuri Dixit Nene in white chikankari Tarun Tahiliani lehenga 3

ನವದೆಹಲಿ: ಕೆಆರ್‌ಪಿಪಿ (KRPP) ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ (Janardhan Reddy) ಸುಪ್ರೀಂಕೋರ್ಟ್‌ನಲ್ಲಿ (Supreme Court) ಹಿನ್ನಡೆಯಾಗಿದೆ. ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿಗೆ (Ballari) ಪ್ರವೇಶವನ್ನು ನಿರಾಕರಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಿನ್ನಲೆ ಬಳ್ಳಾರಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಈ ಹಿನ್ನಲೆ ಬಳ್ಳಾರಿ ಪ್ರವೇಶಕ್ಕೆ ನೀಡಿರುವ ಅನುಮತಿಯನ್ನು ವಿಸ್ತರಿಸಬೇಕು ಎಂದು ಸುಪ್ರೀಂಗೆ ಮನವಿ ಮಾಡಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ ಆರ್ ಶಾ ನೇತೃತ್ವದ ದ್ವಿಸದಸ್ಯ ಪೀಠ ಅನುಮತಿ ನಿರಾಕರಿಸಿತು.

ವಿಚಾರಣೆ ವೇಳೆ ವಾದ ಮಂಡಿಸಿದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ರೆಡ್ಡಿ ಮೊಮ್ಮಗಳ ಜನನ ಹಿನ್ನಲೆ ಬಳ್ಳಾರಿ ತೆರಳಲು ಅನುಮತಿ ನೀಡಿತ್ತು. ಜನಾರ್ದನ ರೆಡ್ಡಿಗೆ ವಿಧಿಸಿದ್ದ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿತ್ತು. ಅದನ್ನು ಸದ್ಯ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಅನುಮತಿ ನಿರಾಕರಿಸಿ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರೆಡ್ಡಿ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದರು.

ಸುಪ್ರೀಂಕೋರ್ಟ್ ನಿರ್ಧಾರದಿಂದ ಜನಾರ್ದನ ರೆಡ್ಡಿಗೆ ತೀವ್ರ ಹಿನ್ನಡೆಯಾಗಿದ್ದು ಬಳ್ಳಾರಿಗೆ ತೆರಳುವ ಅವಕಾಶದಿಂದ ವಂಚಿತರಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅರುಣಾ ಸೇರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತಹ ಪರಿಸ್ಥಿತಿಯಲ್ಲಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ