ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಇಂದು ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ.
ಸಂಜೆ ವೇಳೆ ಮಳೆ ಆರಂಭಕ್ಕೂ ಮೊದಲು ಗುಡುಗು ಸಹಿತ ಗಾಳಿ ಬೀಸುತ್ತಿತ್ತು. ಹಾಗಾಗಿ ಮಳೆ ಬರಬಹುದು ಎಂದು ಸೋಮಸುಂದರ್ ಮನೆಯಂಗಳದಲ್ಲಿ ಒಣಗಿಸಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ.
ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.
ನಾಟಿವೈದ್ಯ ಹಂದಾಡಿ ಗೋವಿಂದ ಪೂಜಾರಿ ನಿಧನ
ಬ್ರಹ್ಮಾವರ:ಹಿರಿಯ ನಾಟಿವೈದ್ಯ, ಕೃಷಿಕ ಹಂದಾಡಿ ಗೋವಿಂದ ಪೂಜಾರಿ (82) ಅಸೌಖ್ಯದಿಂದ ಮೇ 3ರಂದು ಹಂದಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿಿ, ಪುತ್ರ, ಇಬ್ಬರು ಪುತ್ರಿಿಯರನ್ನು ಅಗಲಿದ್ದಾಾರೆ.
ಹಿರಿಯ ಕೃಷಿಕರಾದ ಗೋವಿಂದ ಪೂಜಾರಿಯವರು ಸ್ತ್ರೀ ಸಂಬಂಧಿತ ಅನಾರೋಗ್ಯ ಸಮಸ್ಯೆೆಗಳಿಗೆ ಔಷಧಿ ಕೊಡುತ್ತಿಿದ್ದರು. ಜಾನುವಾರುಗಳ ಕಾಲುಬಾಯಿ, ಕೆಚ್ಚಲುಬಾವಿನಂತಹ ಕಾಯಿಲೆಗಳು ಮತ್ತು ಗರ್ಭಧಾರಣೆ ಇತ್ಯಾಾದಿಗಳಿಗೆ ಸಂಬಂಧಿಸಿ ನಾಟಿ ಔಷಧಿ ಕೊಡುತ್ತಿಿದ್ದರು. ವಿವಿಧ ಕೃಷಿ ಪ್ರಯೋಗಗಳನ್ನು ನಡೆಸಿ ಇತರ ಕೃಷಿಕರಿಗೆ ಮಾರ್ಗದರ್ಶಿಯಾಗಿದ್ದರು. ಪಂಚಾಯಿತಿದಾರರಾಗಿಯೂ ಕಾರ್ಯನಿರ್ವಹಿಸಿದ್ದರು.
ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು
ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃಚರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕೊಡದೆ ಮೃತಪಟ್ಟಿದ್ದಾರೆ.
ಮೃತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿ ಕಾರ್ಯಕರ್ತರಾಗಿದ್ದರು.