ಭಾನುವಾರ, ಮೇ 5, 2024
ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರತ್ಕಲ್: ಗಾಂಜಾ ಮತ್ತಿನಲ್ಲಿ ತಂಡದಿಂದ ತಲವಾರು ದಾಳಿ - ರಿಕ್ಷಾ ಚಾಲಕನಿಗೆ ಗಾಯ

Twitter
Facebook
LinkedIn
WhatsApp
download 7 5

ಸುರತ್ಕಲ್, ಫೆ 27 : ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ