ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಗೋಣಿಚೀಲದಲ್ಲಿ ಮಹಿಳೆ ಮೃತದೇಹ ಪತ್ತೆ; ಮನೆಬಿಟ್ಟು ಹೋದ ಪತಿರಾಯ, ಹೆಚ್ಚಿದ ಅನುಮಾನ..!

Twitter
Facebook
LinkedIn
WhatsApp
ಸುಳ್ಯ: ಗೋಣಿಚೀಲದಲ್ಲಿ ಮಹಿಳೆ ಮೃತದೇಹ ಪತ್ತೆ; ಮನೆಬಿಟ್ಟು ಹೋದ ಪತಿರಾಯ, ಹೆಚ್ಚಿದ ಅನುಮಾನ..!

ಸುಳ್ಯ, ನ 22: ಇಲ್ಲಿನ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಪತಿಯೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿರುವ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಗೋಣಿಚೀಲದೊಳಗೆ ಪತ್ತೆಯಾಗಿದೆ. ಕಳೆದ ಆರು ತಿಂಗಳಿನಿಂದ ಈ ಬಾಡಿಗೆ ಮನೆಯಲ್ಲಿ ದಂಪತಿ ವಾಸವಾಗಿದ್ದು, ಎರಡು ದಿನಗಳ ಹಿಂದಷ್ಟೇ ಇಮ್ರಾನ್ ಊರಿಗೆ ತೆರಳುವುದಾಗಿ ಹೊಟೇಲ್‌ನಲ್ಲಿ ಹೇಳಿ ಹೋಗಿದ್ದ. ಇನ್ನು ಕೆಲ ದಿನಗಳ ಹಿಂದೆ ಮನೆಯಲ್ಲಿ ಕಿರುಚಿದ ಶಬ್ದ ಕೇಳಿದ್ದಲ್ಲದೆ, ಇಮ್ರಾನ್ ಊರಿಗೆಂದು ಹೊರಟು ಹೋಗಿದ್ದಾಗ ಪತ್ನಿಯನ್ನು ಕರೆದೊಯ್ದಿರಲಿಲ್ಲವಾದ್ದರಿಂದ ಅಕ್ಕಪಕ್ಕದ ರೂಂನಲ್ಲಿ ವಾಸವಾಗಿದ್ದವರಿಗೆ ಸಂಶಯ ಮೂಡಿತ್ತು. ಹೀಗಾಗಿ ಆತ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲಕರಿಗೆ ಅಕ್ಕಪಕ್ಕದವರು ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಇಂದು ಸಂಜೆ ಬಂದು ರೂಂ ಬಾಗಿಲು ಒಡೆದು ನೋಡಿದಾಗ ಗೋಣಿಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆಕೆಯನ್ನು ಆಕೆಯ ಪತಿ ಇಮ್ರಾನ್ ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹ ತುಂಬಿಸಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸುಳ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಫಿಂಗರ್ ಪ್ರಿಂಟ್ ತಜ್ಞರು ಮತ್ತು ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ