ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ ಸಮಂತಾ.

Twitter
Facebook
LinkedIn
WhatsApp
ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ ಸಮಂತಾ.

ಸಮಂತಾ ವಿಚ್ಛೇದನ ಪಡೆದುಕೊಂಡ ನಂತರದಲ್ಲಿ ಅನೇಕರು ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರಿಗೆ ಅಬಾರ್ಷನ್​ ಆಗಿತ್ತು, ಸಮಂತಾಗೆ ಬೇರೆಯವರ ಜತೆ ಸಂಬಂಧ ಇತ್ತು ಎಂಬಿತ್ಯಾದಿ ಸುದ್ದಿಗಳನ್ನು ಹಬ್ಬಿಸುವ ಕುತಂತ್ರ ನಡೆದಿತ್ತು.

ಸಮಂತಾ ಅವರು ವೈಯಕ್ತಿಕ ವಿಚಾರದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ನಾಗ ಚೈತನ್ಯ ಜತೆ ವಿಚ್ಛೇದನ ಪಡೆದುಕೊಂಡ ವಿಚಾರದ ಬಗ್ಗೆ ಹರಿದಾಡುತ್ತಿರುವ ಸುದ್ದಿ ಒಂದೆರಡಲ್ಲ. ಆದರೆ, ಕೆಲವರು ತೀರಾ ಕೆಳಮಟ್ಟಕ್ಕೆ ಇಳಿದು ಸಮಂತಾ ಹೆಸರು ಕೆಡಿಸುವ ಪ್ರಯತ್ನ ಮಾಡಿದ್ದರು. ಇದಕ್ಕೆ ಈಗ ಸಮಂತಾ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ಅನೇಕರಿಗೆ ನಡುಕ ಹುಟ್ಟಿಸಿದೆ.
ಸಮಂತಾ ವಿಚ್ಛೇದನ ಪಡೆದುಕೊಂಡ ನಂತರದಲ್ಲಿ ಅನೇಕರು ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರಿಗೆ ಅಬಾರ್ಷನ್​ ಆಗಿತ್ತು, ಸಮಂತಾಗೆ ಬೇರೆಯವರ ಜತೆ ಸಂಬಂಧ ಇತ್ತು ಎಂಬಿತ್ಯಾದಿ ಸುದ್ದಿಗಳನ್ನು ಹಬ್ಬಿಸುವ ಕುತಂತ್ರ ನಡೆದಿತ್ತು. ಆದರೆ, ಸಮಂತಾ ಈ ವಿಚಾರದಲ್ಲಿ ಸುಮ್ಮನೆ ಕೂತಿಲ್ಲ. ಅವರ ಕಡೆಯಿಂದ ಖಡಕ್​ ಆಗಿಯೇ ಇದಕ್ಕೆಲ್ಲ ಉತ್ತರ ಬಂದಿತ್ತು. ಆದರೂ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ನಡೆದೇ ಇತ್ತು. ಇದು ಸಮಂತಾ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಪೋಸ್ಟ್ ಹಾಕಿದ್ದ ಸಮಂತಾ, ‘ನನ್ನ ವೈಯಕ್ತಿಕ ವಿಚಾರಕ್ಕೆ ನೀವು ಸ್ಪಂದಿಸಿರುವುದು ಖುಷಿ ನೀಡಿದೆ. ವದಂತಿಗಳ ವಿಚಾರದಲ್ಲಿ ನೀವು ನನ್ನ ಪರವಾಗಿ ನಿಂತಿರುವುದಕ್ಕೆ ಧನ್ಯವಾದಗಳು. ನನಗೆ ಬೇರೆ ಸಂಬಂಧವಿದೆ, ನಾನು ಮಕ್ಕಳನ್ನು ಪಡೆಯಲು ಬಯಸಲಿಲ್ಲ, ನಾನು ಅವಕಾಶವಾದಿ ಮತ್ತು ನಾನು ಗರ್ಭಪಾತ ಮಾಡಿಸಿಕೊಂಡಿದ್ದೇನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ವಿಚ್ಛೇದನ ಎನ್ನುವುದು ನೋವಿನ ಪ್ರಕ್ರಿಯೆ. ಇದು ಗುಣವಾಗಲು ಸಮಯ ನೀಡಿ. ಆದರೆ ನಾನು ಒಂದು ಪ್ರಾಮಿಸ್​ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸಮಂತಾ ಪರ ವಕೀಲರು ಈಗ ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ಬಗ್ಗೆ ಅತೀ ಕೆಟ್ಟದಾಗಿ ಸುದ್ದಿ ಮಾಡಿದ ಮೂರು ಯೂಟ್ಯೂಬ್​ ಚಾನೆಲ್​ಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಒಂದೊಮ್ಮೆ ಇದು ಸಾಬೀತಾದರೆ, ಈ ಯೂಟ್ಯೂಬ್​ ಚಾನೆಲ್​ಗಳು ಸಮಂತಾಗೆ ದೊಡ್ಡ ಮೊತ್ತದ ಹಣ ಪಾವತಿ ಮಾಡಬೇಕಿದೆ. ಸದ್ಯ, ಇದರಿಂದ ಅನೇಕರಿಗೆ ನಡುಕ ಹುಟ್ಟಿದೆ.
ಸಮಂತಾ ಸದ್ಯ ರಿಷಿಕೇಶ ಪ್ರವಾಸದಲ್ಲಿದ್ದಾರೆ. ರಿಷಿಕೇಶದಲ್ಲಿರುವ ಶ್ರೀ ಸ್ವಾಮಿ ಪುರುಷೋತ್ತಮಾನಂದ ಜೀ ಮಹರಾಜ್ ವಸಿಷ್ಠ್ ಆಶ್ರಮದ ದ್ವಾರದ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಜೊತೆಗೆ ‘ಸಂತಸ ಬೇರೆಲ್ಲೂ ಇಲ್ಲ, ನಮ್ಮೊಳಗಿದೆ’ ಎಂದು ಬರೆದುಕೊಂಡಿರುವ ಫಲಕದ ಚಿತ್ರವನ್ನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು