ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೂರ್ಯಕುಮಾರ್ ಬಗ್ಗೆ ರೋಹಿತ್ ಮಾಡಿದ್ದ ಹಳೆಯ ಟ್ವೀಟ್ ವೈರಲ್

Twitter
Facebook
LinkedIn
WhatsApp
ಸೂರ್ಯಕುಮಾರ್ ಬಗ್ಗೆ ರೋಹಿತ್ ಮಾಡಿದ್ದ ಹಳೆಯ ಟ್ವೀಟ್ ವೈರಲ್

ರೋಹಿತ್ ಶರ್ಮಾ 10 ವರ್ಷಗಳ ಹಿಂದೆ ಸೂರ್ಯಕುಮಾರ್ ಯಾದವ್ ಬಗ್ಗೆ ಮಾಡಿದ ಒಂದು ಟ್ವೀಟ್ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಟ್ವೀಟ್ ಅನ್ನು ರೋಹಿತ್ ಡಿಸೆಂಬರ್ 10, 2011 ರಂದು ಪೋಸ್ಟ್ ಮಾಡಿದ್ದರು. “ಈಗಷ್ಟೆ ಚೆನ್ನೈನಲ್ಲಿ ಬಿಸಿಸಿಐ ಪ್ರಶಸ್ತಿ ಸಮಾರಂಭ ಮುಗಿಯಿತು. ಮುಂಬೈಯ ಸೂರ್ಯಕುಮಾರ್ ಯಾದವ್ ಭವಿಷ್ಯದಲ್ಲಿ ದೊಡ್ಡ ಆಟಗಾರನಾಗುತ್ತಾನೆ,” ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದಾರೆ. ಹಿಟ್​ಮ್ಯಾನ್ ಆಗಲೇ ಸೂರ್ಯ ಬಗ್ಗೆ ಭವಿಷ್ಯ ನುಡಿದಿದ್ದ ಟ್ವೀಟ್ ಈಗ ಎಲ್ಲೆಡೆ ಹರಿದಾಡುತ್ತಿದೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಶತಕ ಸಿಡಿಸಿ ಆರ್ಭಟಿಸುತ್ತಿದ್ದಂತೆ ಇವರ ಬಗ್ಗೆ ರೋಹಿತ್ ಶರ್ಮಾ ಮಾಡಿದ್ದ ಟ್ವೀಟ್ ಒಂದು ಸಖತ್ ವೈರಲ್ ಆಗುತ್ತಿದೆ.

ಸೂರ್ಯಕುಮಾರ್ ಅವರು ತಮ್ಮ ಚೊಚ್ಚಲ ಶತಕದ ಮೂಲಕ ವಿಶೇಷ ಸಾಧನೆ ಕೂಡ ಮಾಡಿದ್ದಾರೆ. ಟಿ20 ಮಾದರಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ದೀಪಕ್ ಹೂಡ ಈ ಸಾಧನೆ ಮಾಡಿದ್ದರು. ಇವರು ಗಳಿಸಿ 117 ರನ್ ಭಾರತೀಯ ಬ್ಯಾಟರ್ ಒಬ್ಬ ಟಿ20 ಕ್ರಿಕೆಟ್​ನಲ್ಲಿ ಗಳಿಸಿದ ಎರಡನೇ ಗರಿಷ್ಠ ಮೊತ್ತವಾಗಿದೆ. ಕಳೆದ ಕೆಲವು ಸಮಯದಿಂದ ಟೀಮ್ ಇಂಡಿಯಾದ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿರುವ ಸೂರ್ಯ 19 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. 537 ರನ್ ಕಲೆಹಾಕಿದ್ದಾರೆ. 38.35 ಸರಾಸರಿ ಜೊತೆ 177.22 ಸ್ಟ್ರೈಕ್​ರೇಟ್ ಹೊಂದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರನೇ ಟಿ20 ಪಂದ್ಯದಲ್ಲಿ ಭಾರತ ಸೋತಿತಾದರೂ ಸೂರ್ಯಕುಮಾರ್ ಯಾದವ್ (Suryakumar Yadav) ಎಲ್ಲರ ಮನ ಗೆದ್ದರು. 216 ರನ್​ಗಳ ಬೆಟ್ಟದಂತಹ ಟಾರ್ಗೆಟ್ ಬೆನ್ನಟ್ಟಲು ಹೊರಟ ಟೀಮ್ ಇಂಡಿಯಾ (Team India) ಪ್ರಮುಖ ಬ್ಯಾಟರ್​ಗಳನ್ನು ಕಳೆದುಕೊಂಡೆ ಸಾಗಿತು. ಆದರೆ, ಸೂರ್ಯ ಕ್ರೀಸ್​ ಕಚ್ಚಿ ನಿಂತು ತಂಡದ ಗೆಲುವಿಗೆ ಏಕಾಂಗಿ ಹೋರಾಟ ನಡೆಸಿದರು. 4ನೇ ವಿಕೆಟ್​ಗೆ ಶ್ರೇಯಸ್ ಅಯ್ಯರ್ (28 ರನ್) ಜೊತೆಗೂಡಿ 119 ರನ್​​ಗಳ ಕಾಣಿಕೆ ನೀಡಿದರು. ಆದರೆ, ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. 19ನೇ ಓವರ್​ನ ಕೊನೆಯ ಎಸೆತದಲ್ಲಿ ಔಟಾದರು. ಸೂರ್ಯಕುಮಾರ್ 55 ಎಸೆತಗಳಲ್ಲಿ 14 ಫೋರ್, 6 ಸಿಕ್ಸರ್ ಸಿಡಿಸಿ 117 ರನ್​ಗೆ ನಿರ್ಗಮಿಸಿದರು. ಶತಕ ಸಿಡಿಸುವ ಮೂಲಕ ವಿಶೇಷ ಸಾಧನೆಯನ್ನು ಕೂಡ ಮಾಡಿದ್ದಾರೆ. ಸೂರ್ಯ ಶತಕ ಸಿಡಿಸಿ ಆರ್ಭಟಿಸುತ್ತಿದ್ದಂತೆ ಇವರ ಬಗ್ಗೆ ರೋಹಿತ್ ಶರ್ಮಾ (Rohit Sharma) ಮಾಡಿದ್ದ ಟ್ವೀಟ್ ಒಂದು ಸಖತ್ ವೈರಲ್ ಆಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist