ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೆಕ್ಸ್ ದಂಧೆಕೋರರಿಂದ 15 ವರ್ಷದ ಬಾಲಕಿಯನ್ನು ರಕ್ಷಿಸಿದ ಆರ್‌ಪಿಎಫ್ ಯೋಧರು

Twitter
Facebook
LinkedIn
WhatsApp
ಸೆಕ್ಸ್ ದಂಧೆಕೋರರಿಂದ 15 ವರ್ಷದ ಬಾಲಕಿಯನ್ನು ರಕ್ಷಿಸಿದ ಆರ್‌ಪಿಎಫ್ ಯೋಧರು

ಬೆಂಗಳೂರು: ನಿರಂತರವಾಗಿ ತಂದೆಯಿಂದಲೇ ದೈಹಿಕ ಶೋಷಣೆಗೆ ಒಳಗಾಗುತ್ತಿದ್ದ ಬಿಹಾರದ ಮೂಲದ ಅಪ್ರಾಪ್ತ ಬಾಲಕಿ ಮಾನಸಿಕಿಕವಾಗಿ ನೊಂದು ಆತನಿಂದ ತಪ್ಪಿಸಿಕೊಂಡು ಓಡಿ ಬಂದು ಬೆಂಗಳೂರಿನ ಸೆಕ್ಸ್ ದಂಧೆಕೋರರ ಕೈಗೆ ಸಿಕ್ಕಿ, ಬಾಲಕಿಯನ್ನು ಕಳ್ಲಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಪೊಲೀಸರು ರಕ್ಷಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಶುಕ್ರವಾರ (ಜುಲೈ 9) ಬಿಹಾರಕ್ಕೆ ತೆರಳುವ ದಾನಾಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆಕೆಯನ್ನು ಅಪರಿಚಿತ ಸ್ಥಳಕ್ಕೆ ಸಾಗಿಸುತ್ತಿದ್ದಾಗ ಕೃಷ್ಣರಾಜಪುರಂ ರೈಲ್ವೆ ನಿಲ್ದಾಣದಲ್ಲಿ ಶೋಧ ನಡೆಸಿದ್ದ ವೇಳೆ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 10.30 ರ ಸುಮಾರಿನಲ್ಲಿ ರೈಲಿನಲ್ಲಿ ಶೋಧ ನಡೆಸುತ್ತಿದ್ದಾಗ 15 ವರ್ಷದ ಬಾಲಕಿಯನ್ನು ಗಮನಿಸಿದ ಅಧಿಕಾರಿಗಳು ಸಂಶಯಗೊಂಡು ಆಕೆಯನ್ನು ಮಾತನಾಡಿಸಿದ್ದಾರೆ. ಈ ವೇಳೆ ಬಾಲಕಿ ತುಂಬಾ ಭಯಭೀತಳಾಗಿದ್ದಳು ಮತ್ತು ಮಾತನಾಡಲು ತಡವರಿಸುತ್ತಿದ್ದಳು. ತದನಂತರ ಆಕೆ ನೀಡಿದ ಮಾಹಿತಿ ಮೇರೆಗೆ ಕೂಡಲೇ ಕಾರ್ಯ ಪ್ರವೃತ್ತರಾದ ಅಧಿಕಾರಿಗಳು ಆಕೆಯನ್ನು ರಕ್ಷಿಸಿದ್ದಾರೆ.

‘ಬಿಹಾರದ ಪೂರ್ವಿ ಚಂಪಾರನ್ (ಮೋತಿಹಾರಿ) ನಿವಾಸಿ ಎಂದು ಹೇಳಿಕೊಂಡ ಬಾಲಕಿ ತನ್ನ ತಂದೆಯಿಂದ ಪದೇ ಪದೇ ನಡೆಯುವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದಿಂದಾಗಿ ಬೇಸತ್ತು ಮನೆಯಿಂದ ಓಡಿಹೋಗಿದ್ದಳು. ತಂದೆಯಿಂದ ದೈಹಿಕ ಶೋಷಣೆಗೆ ಒಳಗಾಗುವ ವಿಷಯ ಆಕೆಯ ತಾಯಿಗೂ ತಿಳಿದಿತ್ತಾದರೂ ಆಕೆ ಮಧ್ಯಪ್ರವೇಶಿಸುತ್ತಿರಲಿಲ್ಲ. ಅಷ್ಟೇ ಅಲ್ಲದೆ ಅಪ್ರಾಪ್ತೆಯಾದ ಆಕೆಯನ್ನು ಮದುವೆ ಮಾಡಿಸಲು ಆಕೆಯ ಪೋಷಕರು ಸಿದ್ಧತೆ ನಡೆಸಿದ್ದರು. ಇದರಿಂದ ಬೇಸರಗೊಂಡ ಆಕೆ ಮನೆಯಿಂದ ಪರಾರಿಯಾಗಿದ್ದಳು.

ಸೆಕ್ಸ್ ದಂಧೆಕೋರರಿಂದ 15 ವರ್ಷದ ಬಾಲಕಿಯನ್ನು ರಕ್ಷಿಸಿದ ಆರ್‌ಪಿಎಫ್ ಯೋಧರು

ಬೆಂಗಳೂರಿಗೆ ಬಂದಿದ್ದ ಆಕೆಗೆ ಕೆಲ ದುಷ್ಕರ್ಮಿಗಳು ಡ್ರಗ್ಸ್ ನೀಡಿ ಆಕೆಯನ್ನು ಅಪಹರಿಸಿದ್ದರು. ತದನಂತರ ಕಂಟೈನರ್;ನಲ್ಲಿಟ್ಟು ಆಕೆಯನ್ನು ಸುಮಾರು 1 ತಿಂಗಳ ಕಾಲ ಪೀಡಿಸಿದ್ದರು. ಬಳಿಕ ರೈಲಿನಲ್ಲಿ ಬೇರೊಂದು ಸ್ಥಳಕ್ಕೆ ಕಳ್ಳಸಾಗಣೆ ಮಾಡುವಾಗ ಪೋಲೀಸ್ ತಂಡದ ಸಿಬ್ಬಂದಿಗಳು ಆಕೆಯನ್ನು ಗುರುತಿಸಿ ರಕ್ಷಣೆ ಮಾಡಿದ್ದಾರೆ.

ಪ್ರಸ್ತುತ ಬಾಲಕಿಯನ್ನು ಕೆಎಸ್‌ಆರ್ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ಯಲಾಗಿದ್ದು, ಆಕೆಯ ಸುರಕ್ಷತೆಗಾಗಿ ಡಾನ್ ಬಾಸ್ಕೊ ಹೋಮ್‌ಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳ ತಿಳಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು