ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ

Twitter
Facebook
LinkedIn
WhatsApp
ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ

ಮುಂಬೈ: 9 ವರ್ಷದ ಬಾಲಕಿಯ (Girl) ಮೇಲೆ 15 ವರ್ಷದ ಬಾಲಕನೊಬ್ಬ (Boy) ಅತ್ಯಾಚಾರ (Rape) ನಡೆಸಿ, ಕೊಲೆಗೈದಿರುವ (Murder) ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಕಲ್ಯಾಣ್‌ನಲ್ಲಿ (Kalyan) ನಡೆದಿದೆ. ಮೃತ ಬಾಲಕಿಯ ತಂದೆಯ ಮೇಲಿನ ಸೇಡಿಗೆ ಅಪ್ರಾಪ್ತ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದ ಆವರಣದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.

ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಪ್ರಾಪ್ತ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ಬಾಲಕನ ಬಗ್ಗೆ ಸ್ಥಳೀಯರಲ್ಲಿ ವಿಚಾರಣೆ ಮಾಡಲಾಗಿದ್ದು, ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದು ಮಹಾತ್ಮ ಫುಲೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ವಿಚಾರಣೆ ವೇಳೆ ಅಪ್ರಾಪ್ತ ಆರೋಪಿ ನಡೆದ ಘಟನೆಯನ್ನು ತಿಳಿಸಿದ್ದಾನೆ. 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದು, ಹಲ್ಲೆಗೆ ಒಳಗಾಗಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಆತನ ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ನಡೆಸಿ ಬ್ಲೇಡ್‌ನಿಂದ ಕತ್ತು ಸೀಳಿರುವುದಾಗಿ ತಿಳಿಸಿದ್ದಾನೆ.

STOP RAPE

ಪೊಲೀಸರು ಲೈಂಗಿಕ ಅಪರಾಧಗಳಿಗೆ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (POCSO)ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ