ಸೇತುವೆಯಿಂದ 50 ಅಡಿ ಕೆಳಗೆ ಬಿದ್ದ ಬಸ್ ; 14 ಮಂದಿ ಸಾವು!
Twitter
Facebook
LinkedIn
WhatsApp

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ.
ದುರ್ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ.
ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ.