ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೈಬರ್ ಅಪರಾಧ ತಡೆಗೆ ಟಾಫ್ ಕಾಪ್ ತಂತ್ರಜ್ಞಾನ ಜಾರಿ

Twitter
Facebook
LinkedIn
WhatsApp
ಸೈಬರ್ ಅಪರಾಧ ತಡೆಗೆ ಟಾಫ್ ಕಾಪ್ ತಂತ್ರಜ್ಞಾನ ಜಾರಿ

ಬೆಂಗಳೂರು: ಟೆಲಿಕಾಂ ಉದ್ಯಮ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸೈಬರ್ ಅಪರಾಧಗಳು ಸಹ ಅದೇ ವೇಗದಲ್ಲಿ ದಾಖಲಾಗುತ್ತಿರುವುದು ತೀವ್ರ ಕಳವಳಕಾರಿ ಸಂಗತಿ. ಇದರ ನಿಯಂತ್ರಣಕ್ಕಾಗಿ ಶೀಘ್ರದಲ್ಲಿ ‘ಟಾಫ್ ಕಾಪ್’ ವಿನೂತನ ತಂತ್ರಜ್ಞಾನ ಜಾರಿಗೊಳಿಸಲಾಗುವುದೆಂದು ಕೆಂದ್ರ ದೂರಸಂಪರ್ಕ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಕೆ. ರಾಜಾರಾಮನ್ ಹೇಳಿದರು.

ದೂರಸಂಪರ್ಕ ಸುರಕ್ಷತೆ ಕುರಿತು ಬೆಂಗಳೂರಿನಲ್ಲಿ ಆರಂಭಗೊಂಡ ಎರಡು ದಿನಗಳ ಅಖಿಲ ಭಾರತ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಟೆಲಿಕಾಂ ಉದ್ಯಮ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆದು ಅದರ ಲಾಭ ಜಗತ್ತಿನ ಎಲ್ಲ ನಾಗರಿಕರಿಗೆ ವಿಫುಲವಾಗಿ ದೊರೆಯುತ್ತಿದೆ. ಇದು ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಯ ಕುರುಹು ಆಗಿದೆ. ಆದರೆ ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ಇದೇ ತಂತ್ರಜ್ಞಾನದ ದುರುಪಯೋಗವೂ ನಡೆಯುತ್ತಿರುವುದು ಆಂತಕಕಾರಿಯಾಗಿದೆ ಎಂದರು.

ತಂತ್ರಜ್ಞಾನ ಬಳಿಸಿಕೊಂಡು ಸೈಬರ್ ಅಪರಾಧ ಪ್ರಕರಣಗಳು ನಿತ್ಯವೂ ದೊಡ್ಡ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಇದರಿಂದ ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ದೂರಸಂಪರ್ಕ ಇಲಾಖೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಹಾಗೂ ನಾಗರಿಕರಿಗೆ ಸುರಕ್ಷತೆಗಳನ್ನು ಸ್ಥಿರೀಕರಣಗೊಳಿಸಲು “ಟಾಫ್ಕಾಪ್” ಎಂಬ ವಿನೂತನ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು. ತನ್ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ನಾಗರಿಕರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪ

ಈ ನಿಟ್ಟಿನಲ್ಲಿ ದೂರಸಂಪರ್ಕ ಇಲಾಖೆ ಹಾಗೂ ಕಾನೂನು ಜಾರಿ ಅಧಿಕಾರಿಗಳ ಮಧ್ಯೆ ಸಹಕಾರ ಹಾಗೂ ಸಮನ್ವಯತೆ ಸಾಧಿಸಲಾಗುವುದು. ಇಂತಹ ಕಾರ್ಯಾಗಾರಗಳು ಇಲಾಖೆಯ ಅಧಿಕಾರಿಗಳ ದಕ್ಷತೆ ಹಾಗೂ ನೈಪುಣ್ಯತೆ ಹೆಚ್ಚಿಸಲು ಸಹಕಾರಿಯಾಗಲಿದ್ದು, ಸುರಕ್ಷತೆ ಕುರಿತು ಚರ್ಚೆ ನಡೆಸಿ ಹೊಸ ಆವಿಷ್ಕಾರಗಳತ್ತ ಮುಖಮಾಡಲು ಅನುಕೂಲವಾಗಲಿವೆ ಎಂದು ರಾಜಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು.

ದೂರಸಂಪರ್ಕ ಇಲಾಖೆಯ ಮಹಾನಿರ್ದೇಶಕ ಸುಭಾಷಚಂದ್, ಹಿರಿಯ ಉಪಮಹಾನಿರ್ದೇಶಕಿ ರಜನಿ ತನೇಜಾ, ಕರ್ನಾಟಕ ದೂರಸಂಪರ್ಕ ಇಲಾಖೆಯ ಹಿರಿಯ ಉಪಮಹಾನಿರ್ದೇಶಕ ರಾಕೇಶ್ಕುಮಾರ ದುಬೆ, ಮುಂತಾದವರು ಉಪಸ್ಥಿತರಿದ್ದರು. ಗೃಹ ಇಲಾಖೆಯ – ಅಧಿಕಾರಿಗಳು, ಟೆಲಿಕಾಂ ಉದ್ಯಮದ ದಿಗ್ಗಜರು, ಖಾಸಗಿ ಟೆಲಿಕಾಂ, ಇಂಟರ್ನೆಟ್ ಕ್ಷೇತ್ರದ ಪ್ರಮುಖರು ಹಾಗೂ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ, ಕೇರಳ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ