ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೊಳ್ಳೆ ಕೋಯಿಲ್ ನ ವಿಷಕಾರಿ ಹೊಗೆಯಿಂದ ಉಸಿರುಗಟ್ಟಿ ಮಗು ಸೇರಿ ಆರು ಮಂದಿ ಮೃತ್ಯು!

Twitter
Facebook
LinkedIn
WhatsApp
anupama parameswaran 168006591310 2

ನವದೆಹಲಿ: ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಕೊನೆಯುಸಿರೆಳೆದಿರುವ ದಾರುಣ ಘಟನೆ ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿರುವುದಾಗಿ ವರದಿ ತಿಳಿಸಿದೆ. ಮೇಲ್ನೋಟಕ್ಕೆ ಮಕ್ಕಳು ಸೇರಿದಂತೆ ಆರು ಮಂದಿ ಉಸಿರುಗಟ್ಟಿ ಇಹಲೋಕ ತ್ಯಜಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದೆ. ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಘಟನೆ ನಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದಿದ್ದು, ಇದರಲ್ಲಿ ಮಕ್ಕಳು ಸೇರಿದಂತೆ ಆರು ಜನರು ವಿಧಿವಶರಾಗಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಸೊಳ್ಳೆ ಕಾಯಿಲ್ ನಿಂದ ಉಸಿರುಗಟ್ಟಿ ನಾಲ್ವರು ಪುರುಷರು, ಒಬ್ಬಳು ಮಹಿಳೆ ಹಾಗೂ ಒಂದು ಮಗು ಸೇರಿದಂತೆ ಆರು ಮಂದಿ ವಿಧಿವಶರಾಗಿದ್ದಾರೆ. ಇದರಲ್ಲಿ 15 ವರ್ಷದ ಬಾಲಕಿ ಹಾಗೂ 45 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ