ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು

Twitter
Facebook
LinkedIn
WhatsApp
ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು

ನವದೆಹಲಿ: ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಮತ್ತು ಸೋನಾಲಿ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಸೋನಾಲಿಯೊಂದಿಗೆ ಗೋವಾಗೆ ತೆರಳಿದ್ಧ ಆಕೆಯ ಇಬ್ಬರು ಸಹಚರರು ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆಕೆಯ ಸಹೋದರ ರಿಂಕು ಧಾಕಾ ಆರೋಪಿಸಿದ್ದರು.

ಹೀಗಾಗಿ ಆ ಇಬ್ಬರು ವ್ಯಕ್ತಿಗಳ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ಅಥವಾ ಕೊಲೆ ಪ್ರಕರಣ ದಾಖಲಿಸಿದ ನಂತರವೇ ಕುಟುಂಬದವರು ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಾಗಿ ಪಟ್ಟುಹಿಡಿದಿದ್ದರು.

ತನ್ನ ಸಾವಿಗೆ ಸ್ವಲ್ಪ ಸಮಯದ ಮೊದಲು, ಸೋನಾಲಿ ಫೋಗಟ್ ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಈ ವೇಳೆ ಆಕೆ ವಿಚಲಿತಳಾಗಿದ್ದಳು ಮತ್ತು ತನ್ನ ಇಬ್ಬರು ಸಹೋದ್ಯೋಗಿಗಳ ವಿರುದ್ಧ ದೂರು ಹೇಳಿದ್ದರು ಎಂದು ಅವರು ಆರೋಪಿಸಿದ್ದರು.

ಹರಿಯಾಣದ ಹಿಸಾರ್ ಮೂಲದ ಸೋನಾಲಿ ಫೋಗಟ್ ಅವರು ಟಿಕ್ ಟಾಕ್‌ನಲ್ಲಿ ಖ್ಯಾತಿ ಗಳಿಸಿದ್ದರು. ಅವರು ಮಂಗಳವಾರ ಬೆಳಿಗ್ಗೆ ಉತ್ತರ ಗೋವಾ ಜಿಲ್ಲೆಯ ಅಂಜುನಾ ಪ್ರದೇಶದ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮೊದಲು ತಿಳಿಸಿದ್ದರು. ಇದೀಗ ಗೋವಾ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಮೃತದೇಹವನ್ನು ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸೋನಾಲಿ ಫೋಗಟ್ ಅವರ 15 ವರ್ಷದ ಮಗಳು ಯಶೋಧರ ತನ್ನ ತಾಯಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ಶೋನಾಲಿ ಫೋಗಟ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರಿಯಾಣದ ಆದಂಪುರ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್‌ ಪಡೆದು ಕುಲದೀಪ್ ಬಿಷ್ಣೋಯ್ ವಿರುದ್ಧ ಸ್ಪರ್ಧಿಸಿದ್ದರು. ಅವರು 2020 ರಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಕೂಡ ಕಾಣಿಸಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ