ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ!
Twitter
Facebook
LinkedIn
WhatsApp
ದಾವಣಗೆರೆ: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರು ಭಾವುಕರಾಗಿದ್ದು, ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕೊವಿಡ್ ವೇಳೆ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಮುಂದೆ ಕಣ್ಣೀರಿಟ್ಟರು. ಅಲ್ಲದೇ ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ಎಂದು ಸ್ಪಷ್ಟಪಡಿಸಿದರು.