ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೌದಿ ಅರೇಬಿಯಾದಲ್ಲಿ: ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರಿನ ಮೂವರು ಸಾವು!

Twitter
Facebook
LinkedIn
WhatsApp
5 gill 1

ಮಂಗಳೂರು (ಫೆ.04): ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಅಪಘಾತ ನಡೆದಿದೆ.‌ ಮಂಗಳೂರು ಮೂಲದ ಅಕೀಲ್, ನಾಸಿರ್, ರಿಝ್ವಾನ್ ಸಾವನ್ನಪ್ಪಿದ ಯುವಕರು. ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. 

ಕಾರಿನಲ್ಲಿದ್ದ ನಾಲ್ವರು ಕೂಡ SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಮೂವರ ಸಹಿತ ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟ ಮಾಹಿತಿ ಲಭ್ಯವಾಗಿದೆ. ಮೃತದೇಹಗಳನ್ನು ಸೌದಿಯ ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಮಂಗಳೂರಿನ ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ. ಅಕೀಲ್ ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತಿಳಿದು ಬಂದಿದೆ.

ರಾಯಲ್‌ ಎನ್‌ಫೀಲ್ಡ್‌ಗೆ ಬೈಕ್‌ ಡಿಕ್ಕಿ, ಯುವತಿ ಸಾವು: ನಿಯಂತ್ರಣ ತಪ್ಪಿದ ಒಂದು ಬೈಕ್‌ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರಿಣಿ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯ ಗಾರ್ವೆಬಾವಿ ಪಾಳ್ಯದಲ್ಲಿ ನಡೆದಿದೆ. ಎಲೆಕ್ಟ್ರಾನಿಕ್‌ ಸಿಟಿಯ ಗೊಲ್ಲಹಳ್ಲಿ ರಸ್ತೆ ಅಪಾರ್ಚ್‌ಮೆಂಟ್‌ ನಿವಾಸಿ ಶುಭಶ್ರೀ(28) ಮೃತ ದುರ್ದೈವಿ. ಈಕೆಯ ಸ್ನೇಹಿತ ಸವಾರ ವಿಮಲ್‌ ಚಂದ್ರ ಮೋಹನ್‌(30) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬುಧವಾರ ತಡರಾತ್ರಿ 12.15ರ ಸುಮಾರಿಗೆ ಎಲೆಕ್ಟ್ರಾನಿಕ್‌ ಸಿಟಿ ಹೊಸೂರು ಕಡೆಯ ಮಾರ್ಗದ ಗಾರ್ವೆಬಾವಿಪಾಳ್ಯದ ಪೈ ಫರ್ನಿಚರ್‌ ಶೋ ರೂಮ್‌ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಶುಭಶ್ರೀ, ಬುಧವಾರ ರಾತ್ರಿ ತನ್ನ ಸ್ನೇಹಿತ ವಿಮಲ್‌ ಚಂದ್ರ ಮೋಹನ್‌ ಜತೆಗೆ ಕೆಟಿಎಂ ದ್ವಿಚಕ್ರ ವಾಹನದಲ್ಲಿ ಸಿಲ್‌್ಕ ಬೋರ್ಡ್‌ ಕಡೆಯಿಂದ ಎಲೆಕ್ಟ್ರಾನಿಕ್‌ ಸಿಟಿ ಕಡೆಗೆ ಬರುತ್ತಿದ್ದರು. ಈ ವೇಳೆ ಗಾರ್ವೆಬಾವಿಪಾಳ್ಯದ ಪೈ ಫರ್ನಿಚರ್‌ ಶೋ ರೂಮ್‌ ಬಳಿ ಬಂದಾಗ ಸವಾರ ವಿಮಲ್‌ ಚಂದ್ರ ಬಲಭಾಗದಲ್ಲಿ ಹೋಗುತ್ತಿದ್ದ ರಾಯಲ್‌ ಎನ್‌ಫೀಲ್ಡ್‌ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸಹಿತ ವಿಮಲ್‌ ಚಂದ್ರ ಹಾಗೂ ಶುಭಶ್ರೀ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಶುಭಶ್ರೀ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. 

ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರೀಕ್ಷಿಸಿದ ವೈದ್ಯರು, ಶುಭಶ್ರೀ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಅಪಘಾತದಲ್ಲಿ ರಾಯಲ್‌ ಎನ್‌ಫೀಲ್ಡ್‌ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೆ ಕೆಟಿಎಂ ದ್ವಿಚಕ್ರ ವಾಹನ ಸವಾರ ವಿಮಲ್‌ ಚಂದ್ರ ಅತೀ ವೇಗ ಹಾಗೂ ಅಜಾಗರೂಕ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ