ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ – 20 ಹಜ್ ಯಾತ್ರಾರ್ಥಿಗಳ ಸಾವು

Twitter
Facebook
LinkedIn
WhatsApp
Rain Report1583178931 8
 

ರಿಯಾದ್: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ (Mecca) ಯಾತ್ರಾರ್ಥಿಗಳನ್ನು (Pilgrims) ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಬಸ್‌ನಲ್ಲಿದ್ದ ಇನ್ನೂ ಹಲವರಿಗೆ ಗಾಯಗಳಾಗಿವೆ ಎಂದು ಸೌದಿ (Saudi Arabia) ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್‌ನಲ್ಲಿ ನಡೆದಿದೆ. ಯಾತ್ರಾರ್ಥಿಗಳನ್ನು ಮೆಕ್ಕಾ ಹಾಗೂ ಮದೀನಾಗೆ ಕರೆದುಕೊಂಡು ಹೋಗುವ ಸಂದರ್ಭ ನಿರಂತರವಾಗಿ ಸವಾಲು ಎದುರಿಸಲಾಗುತ್ತಿದೆ ಎಂಬುದನ್ನು ಈ ಘಟನೆ ಎತ್ತಿ ತೋರಿಸುತ್ತಿದೆ. 

ಇದು ರಂಜಾನ್‌ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.

ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್‌ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ